ಬೆAಗಳೂರು, ಜೂ. ೧೭: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ತಾ. ೧೮ ರ ಬೆಳಿಗ್ಗೆ ೧೧ ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಶಿಕ್ಷಣ ಸಚಿವರು, ಬೆಳಿಗ್ಗೆ ೧೧ ಗಂಟೆಗೆ ಪಿ.ಯು. ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ.