ಮಡಿಕೇರಿ, ಜೂ. ೧೭: ಲೋಕಾಯುಕ್ತ ಅಧಿಕಾರಿಗಳು ತಾ. ೧೮ ರಂದು (ಇಂದು) ಬೆಳಿಗ್ಗೆ ೧೧ ರಿಂದ ೧ ಗಂಟೆಯವರೆಗೆ ಮಡಿಕೇರಿ ತಹಶೀಲ್ದಾರ್ ಅವರ ಕಚೇರಿಯಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ.
ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.