‘ಅಗ್ನಿಪಥ' ಸೇನಾ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ
ನವದೆಹಲಿ, ಜೂ. ೧೭: ‘ಅಗ್ನಿಪಥ' ಸೇನಾ ನೇಮಕಾತಿ ಯೋಜನೆಯಡಿ ನೇಮಕಾತಿ ಪ್ರಕ್ರಿಯೆಯು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದು, ಸೇನೆಗೆ ಸೇರಲು ಬಯಸುವ ಯುವಕರು ಅದಕ್ಕಾಗಿ ತಯಾರಿ ಪ್ರಾರಂಭಿಸಲು ಮನವಿ ಮಾಡಿದರು. ೪ ವರ್ಷಗಳ ಒಪ್ಪಂದದ ನೇಮಕಾತಿ ಯೋಜನೆಯ ವಿರುದ್ಧ ಯುವ ಜನತೆಯ ಕಳವಳವನ್ನು ನಿವಾರಿಸಲು ಸಿಂಗ್ ಪ್ರಯತ್ನಿಸಿದ್ದು ದೇಶದ ಸಶಸ್ತç ಪಡೆಗಳಿಗೆ ಸೇರಲು ಬಯಸುವವರಿಗೆ ಇದು ಸುವರ್ಣ ಅವಕಾಶ ಎಂದು ಹೇಳಿದರು. ೨೦೨೨ರಲ್ಲಿ ಯೋಜನೆಯಡಿ ನೇಮಕಾತಿಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು ೨೧ ವರ್ಷದಿಂದ ೨೩ ವರ್ಷಕ್ಕೆ ಹೆಚ್ಚಿಸಿರುವ ಸರ್ಕಾರದ ನಿರ್ಧಾರವು ಗಮನಾರ್ಹ ಸಂಖ್ಯೆಯಲ್ಲಿ ಯುವಕರು ಸಶಸ್ತç ಪಡೆಗಳಿಗೆ ಸೇರಲು ಅನುವು ಮಾಡಿಕೊಡುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದರು. ಹಲವಾರು ರಾಜ್ಯಗಳಲ್ಲಿ ನಿರಂತರ ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ತಲುಪಲು ಸಿಂಗ್ ಟ್ವೀಟರ್ ಮೂಲಕ ಕೇಂದ್ರದ ನಿರ್ಧಾರವನ್ನು ತಿಳಿಸಿದ್ದಾರೆ. ಸಿಕಂದರಾಬಾದ್‌ನಲ್ಲಿ ಮೂರನೇ ದಿನವೂ ರೈಲುಗಳಿಗೆ ಬೆಂಕಿ ಹಚ್ಚಿ, ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸಲಾಗಿದೆ. ರಾಷ್ಟಿçÃಯ ಹೆದ್ದಾರಿಗಳನ್ನು ತಡೆಯುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದು ಸಿಕಂದರಾಬಾದ್‌ನಲ್ಲಿ ಪೊಲೀಸ್ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಕಳೆದ ಎರಡು ವರ್ಷಗಳಿಂದ ಸೇನೆಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಹಲವು ಯುವಕರಿಗೆ ಸೇನೆಗೆ ಸೇರುವ ಅವಕಾಶ ಸಿಕ್ಕಿಲ್ಲ. ಹೀಗಾಗಿ ಯುವಕರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ಕೇಂದ್ರ ಸರ್ಕಾರವು ಅಗ್ನಿವೀರರ ನೇಮಕಾತಿಯ ವಯಸ್ಸಿನ ಮಿತಿಯನ್ನು ೨೧ ವರ್ಷದಿಂದ ೨೩ ವರ್ಷಕ್ಕೆ ಹೆಚ್ಚಿಸಿದೆ ಎಂದು ಸಿಂಗ್ ಹೇಳಿದರು.
ಡಿನೋಟಿಫಿಕೇಷನ್ ಪ್ರಕರಣ-ಕೋರ್ಟ್ಗೆ ಹಾಜರಾದ ಬಿ.ಎಸ್.ವೈ.
ಬೆಂಗಳೂರು, ಜೂ. ೧೭: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬAಧಿಸಿದAತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಹಿರಿಯ ವಕೀಲ ಸಿ.ವಿ. ನಾಗೇಶ್ ಅವರೊಂದಿಗೆ ಆಗಮಿಸಿದ ಕರ್ನಾಟಕ ಬಿಜೆಪಿಯ ಪ್ರಬಲ ನಾಯಕ ಯಡಿಯೂರಪ್ಪ ಅವರು, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಧೀಶ ಬಿ. ಜಯಂತ ಕುಮಾರ್ ಅವರು, ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ದೂರುದಾರರ ಪರ ವಕೀಲರಿಗೆ ಸೂಚಿಸಿದ್ದಾರೆ. ಜಾಮೀನು ಅರ್ಜಿಯನ್ನು ಪರಿಶೀಲಿಸಿದ ನಂತರ ಪ್ರತಿಕ್ರಿಯೆ ಸಲ್ಲಿಸಲಾಗುವುದು ಎಂದು ದೂರುದಾರರ ಪರ ವಕೀಲ ಕೆ.ವಿ. ಧನಂಜಯ್ ಅವರು ಕೋರ್ಟ್ಗೆ ತಿಳಿಸಿದ್ದಾರೆ. ಜಾಮೀನು ವಿರೋಧಿಸಲು ಕಾರಣಗಳಿದ್ದರೆ, ಆಕ್ಷೇಪಣೆ ಸಲ್ಲಿಸಲಾಗುವುದು. ಅದಕ್ಕಾಗಿ ಸಮಯ ನೀಡಿ ಎಂದು ಕೆ.ವಿ. ಧನಂಜಯ್ ಅವರು ಕೋರಿದರು. ನಂತರ ಪ್ರಕರಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಲಾಯಿತು. ೨೦೧೩ರಲ್ಲಿ ವಾಸುದೇವ ರೆಡ್ಡಿ ಎಂಬವರು ಸಲ್ಲಿಸಿದ್ದ ಖಾಸಗಿ ದೂರಿನ ಪ್ರಕರಣಕ್ಕೆ ಸಂಬAಧಿಸಿದAತೆ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿತ್ತು.
ಎಲ್‌ಪಿಜಿ ಸಂಪರ್ಕ ದುಬಾರಿ
ಚೆನ್ನೆöÊ, ಜೂ. ೧೭: ಈಗಾಗಲೇ ಎಲ್‌ಪಿಜಿ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಮತ್ತೊಂದು ಶಾಕ್ ನೀಡಲಾಗಿದ್ದು, ತೈಲ ಮಾರುಕಟ್ಟೆ ಕಂಪೆನಿಗಳು ಹೊಸ ಎಲ್‌ಪಿಜಿ ಸಂಪರ್ಕಗಳಿಗೆ ನೀಡುವ ಒಂದು ಬಾರಿಯ ಭದ್ರತಾ ಠೇವಣಿಯ ಮೊತ್ತ ಹೆಚ್ಚಿಸಿದ್ದು, ಗ್ರಾಹಕರು ಜೂನ್ ೧೬ ರಿಂದ ಹೆಚ್ಚುವರಿ ರೂ. ೭೫೦ ನೀಡಬೇಕು. ಠೇವಣಿ ಮೊತ್ತವು ಪ್ರತಿ ಸಿಲಿಂಡರ್‌ಗೆ ೧,೪೫೦ ರೂ.ನಿಂದ ೨,೨೦೦ ರೂ.ಗೆ ಏರಿಕೆಯಾಗಿದೆ ಮತ್ತು ರೆಗ್ಯುಲೇಟರ್ ಬೆಲೆಯನ್ನು ಈಗಿರುವ ೧೫೦ ರೂ.ನಿಂದ ೨೫೦ ರೂ.ಗೆ ಏರಿಸಲಾಗಿದೆ. ಈಶಾನ್ಯ ರಾಜ್ಯಗಳ ಗ್ರಾಹಕರಿಗೆ ಪ್ರತಿ ಸಿಲಿಂಡರ್‌ಗೆ ರೂ. ೨,೦೦೦ ಮತ್ತು ರೂ. ರೆಗ್ಯುಲೇಟರ್‌ಗೆ ರೂ. ೨೦೦ ನಿಗದಿಪಡಿಸಲಾಗಿದೆ. ಈ ಹಿಂದೆ ಹೊಸ ಗ್ಯಾಸ್ ಸಂಪರ್ಕ ಪಡೆಯಲು ಬೆಲೆ ರೂ. ೧,೪೫೦ ನೀಡಬೇಕಾಗಿತ್ತು. ಈಗ ಹೊಸ ಎಲ್‌ಪಿಜಿ ಸಂಪರ್ಕ ಪಡೆಯಲು ಎರಡು ಸಿಲಿಂಡರ್‌ಗಳಿಗೆ ಭದ್ರತಾ ಠೇವಣಿಯಾಗಿ ರೂ. ೪,೪೦೦ ನೀಡಬೇಕು. ೫ ಕೆ.ಜಿ. ಸಿಲಿಂಡರ್‌ಗೆ ಭದ್ರತಾ ಹಣ ೮೦೦ ರೂ.ನಿಂದ ೧,೧೫೦ ರೂ.ಗೆ ಏರಿಕೆಯಾಗಿದ್ದು, ಪೈಪ್ ಮತ್ತು ಪಾಸ್‌ಬುಕ್‌ಗೆ ಕ್ರಮವಾಗಿ ೧೫೦ ಮತ್ತು ರೂ. ೨೫ ನಿಗದಿ ಮಾಡಲಾಗಿದೆ.
ಶಾಲ್ಮಲಾ ನದಿಯಲ್ಲಿರುವ ಐತಿಹಾಸಿಕ ಸಹಸ್ರ ಲಿಂಗಗಳೇ ಕಣ್ಮರೆ
ಕಾರವಾರ, ಜೂ. ೧೭: ಉತ್ತರಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳ ಪೈಕಿ ಶಿರಸಿಯ ಸಹಸ್ರಲಿಂಗ ಕ್ಷೇತ್ರವೂ ಒಂದು. ಶಾಲ್ಮಲಾ ನದಿಯಲ್ಲಿರುವ ಈ ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ಸಾವಿರಾರು ಲಿಂಗಗಳ ದರ್ಶನ ಪಡೆದು ಪುನೀತರಾಗುತ್ತಿದ್ದರು. ಆದರೆ, ಇತ್ತೀಚೆಗೆ ಸಹಸ್ರಲಿಂಗ ಕ್ಷೇತ್ರದಲ್ಲಿ ಲಿಂಗಗಳೇ ಕಣ್ಮರೆಯಾಗುತ್ತಿವೆ. ಉತ್ತರಕನ್ನಡ ಜಿಲ್ಲೆಯ ಶಿರಸಿಯ ಭೈರುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಹಸ್ರಲಿಂಗ ಕ್ಷೇತ್ರ ಐತಿಹಾಸಿಕ ಮಹತ್ವವನ್ನು ಹೊಂದಿದೆ. ಇಲ್ಲಿ ಸಾವಿರಾರು ಸಂಖ್ಯೆಯಲ್ಲಿ ಶಿವಲಿಂಗಗಳಿದ್ದವು. ಇವುಗಳು ಒಂದಕ್ಕಿAತ ಒಂದು ವಿಭಿನ್ನವಾಗಿದ್ದ ಕಾರಣ ಹೆಚ್ಚು ಆಕರ್ಷಕವಾಗಿತ್ತು. ಈ ಶಾಲ್ಮಲಾ ನದಿ ಒಟ್ಟು ೨೯೦ ಕಿ.ಮೀ. ಹರಿಯುತ್ತಿದ್ದು, ಈ ನದಿಯ ಒಳಭಾಗದಲ್ಲೂ ಸಾಕಷ್ಟು ಲಿಂಗಗಳಿವೆ. ಆದರೆ, ಇತ್ತೀಚೆಗೆ ಈ ಕ್ಷೇತ್ರದಲ್ಲಿ ಕಾಣಸಿಗುತ್ತಿದ್ದ ಶಿವಲಿಂಗಗಳ ಸಂಖ್ಯೆ ವಿವಿಧ ಕಾರಣಗಳಿಂದ ಭಾರೀ ಕಡಿಮೆಯಾಗತೊಡಗಿವೆ. ಮಳೆಗಾಲದಲ್ಲಿ ರಭಸವಾಗಿ ಹರಿಯುವ ಶಾಲ್ಮಲಾ ನದಿ ಹಲವು ಬಂಡೆಕಲ್ಲುಗಳನ್ನು ಕೊಚ್ಚಿಕೊಂಡು ಸಾಗಿದ್ದರಿಂದ ಹಾಗೂ ನೀರಿನ ರಭಸಕ್ಕೆ ಸವೆದು ಹೋಗಿರುವುದರಿಂದ ಇಲ್ಲಿನ ಲಿಂಗಗಳು ಕಣ್ಮರೆಯಾಗುತ್ತಿವೆ. ಇಲ್ಲಿಗೆ ಭೇಟಿ ನೀಡುವ ಕೆಲವು ಕಿಡಿಗೇಡಿ ಪ್ರವಾಸಿಗರು ಕೂಡಾ ದಾಂಧಲೆ ಎಬ್ಬಿಸಿ, ಮೋಜಿಗಾಗಿ ಕಲ್ಲುಗಳನ್ನು ಒಡೆದು ಹಾಕಿರುವ ದೂರುಗಳಿವೆ. ಇನ್ನು ಸಣ್ಣ ಸಣ್ಣ ಲಿಂಗಗಳನ್ನು ಕೆಲವರು ಕೊಂಡೊಯ್ದಿರುವುದಾಗಿಯೂ ಮಾಹಿತಿಗಳಿವೆ.
ವರ್ಷದ ಅಂತ್ಯದೊಳಗೆ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ
ಜಮ್ಮು, ಜೂ. ೧೭: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿದ ನಂತರ ಈ ವರ್ಷಾಂತ್ಯದೊಳಗೆ ಮೊದಲ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. ಮಹಾರಾಜ ಗುಲಾಬ್ ಸಿಂಗ್ ಅವರ ಪಟ್ಟಾಭಿಷೇಕದ ೨೦೦ನೇ ವರ್ಷಾಚರಣೆಯಲ್ಲಿ ಮಾತನಾಡಿದ ರಕ್ಷಣಾ ಸಚಿವರು, ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ ೯೦ಕ್ಕೆ ಏರಿಕೆಯಾಗಿದೆ. ಕಾಶ್ಮೀರದಲ್ಲಿ ೪೭ ಮತ್ತು ಜಮ್ಮು ೪೩ ಸ್ಥಾನಗಳನ್ನು ಹೊಂದಿದೆ ಎಂದು ಹೇಳಿದರು. ಕೇಂದ್ರಾಡಳಿತ ಪ್ರದೇಶಕ್ಕೆ ಎರಡು ದಿನಗಳ ಭೇಟಿ ನೀಡಿರುವ ರಾಜನಾಥ್ ಸಿಂಗ್, ಈ ವರ್ಷಾಂತ್ಯದ ವೇಳೆಗೆ ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಚುನಾವಣಾ ಆಯೋಗವು ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಪ್ರಾರಂಭಿಸಿದ ಮತ್ತು ಆಗಸ್ಟ್ ೩೧ ರೊಳಗೆ ಕರಡು ಪಟ್ಟಿಯನ್ನು ಸಿದ್ಧಪಡಿಸಿದ ಎರಡು ದಿನಗಳ ನಂತರ ವಿಧಾನಸಭೆ ಚುನಾವಣೆ ನಡೆಸುವ ಸೂಚನೆ ಬಂದಿದೆ ಎಂದಿದ್ದಾರೆ.
ಸೋನಿಯಾ ಗಾಂಧಿ ಆರೋಗ್ಯ ಏರುಪೇರು
ನವದೆಹಲಿ, ಜೂ. ೧೭: ಕೋವಿಡ್-೧೯ ಸೋಂಕಿನಿAದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಲ್ಲಿ ಉಸಿರಾಟ ಸಂಬAಧಿ ಸೋಂಕು ಕಾಣಿಸಿಕೊಂಡಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ. ಕೋವಿಡ್ ಸೋಂಕಿನ ನಂತರ ಮೂಗಿನಲ್ಲಿ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಯವರು ಜೂನ್ ೧೨ ರಂದು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದರು ಎಂದು ಕಾಂಗ್ರೆಸ್‌ನ ಮುಖ್ಯ ವಕ್ತಾರ ಜೈರಾಂ ರಮೇಶ್ ತಿಳಿಸಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗೆ ಒಳಪಡಿಸಲಾಯಿತು. ನಿನ್ನೆ ಬೆಳಿಗ್ಗೆ ಸೋಂಕು ಸಂಬAಧಿತ ಫಾಲೋ ಅಪ್ ತಪಾಸಣೆಯನ್ನು ವೈದ್ಯರು ನಡೆಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.