ಶನಿವಾರಸಂತೆ, ಜೂ. ೧೬: ಸಮೀಪದ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ತಾ. ೧೮ರಂದು ವಿದ್ಯುತ್ ಅದಾಲತ್ ಕಾರ್ಯಕ್ರಮ ನಡೆಯಲಿದೆ.

ಸೋಮವಾರಪೇಟೆ ತಾಲೂಕು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಧನಂಜಯ ನೇತೃತ್ವ ವಹಿಸಿ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ಚರ್ಚಿಸಿ ಸೂಕ್ತ ಪರಿಹಾರ ಒದಗಿಸಲಿದ್ದಾರೆ ಎಂದು ಕೊಡ್ಲಿಪೇಟೆ ವಿದ್ಯುತ್ ಉಪಕೇಂದ್ರದ ಇಂಜಿನಿಯರ್ ಹಿರೇಮಠ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.