ಮಡಿಕೇರಿ, ಜೂ. ೧೫: ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನೆಲ್ಲಿಹುದಿಕೇರಿ ಗ್ರಾಮದಲ್ಲಿ ಅಂಗಡಿ ಮತ್ತು ಹೊಟೇಲ್ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಂಬಾಕುವಿನಿAದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು. ಜೊತೆಗೆ ನಿಯಮ ಉಲ್ಲಂಘಿಸಿದ ಎಂಟು ಪ್ರಕರಣಗಳಲ್ಲಿ ತಲಾ ರೂ. ಒಂದು ಸಾವಿರ ದಂಡ ವಿಧಿಸಲಾಯಿತು.