*ಗೋಣಿಕೊಪ್ಪ, ಜೂ. ೧೭: ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಉಪಕೇಂದ್ರ ಗ್ರೀನ್ ಡಾಟ್ ಟ್ರಸ್ಟ್ ವತಿಯಿಂದ ಮಲೇರಿಯಾ ತಡೆ ಮಾಸಾಚರಣೆಯನ್ನು ಆಚರಿಸಲಾಯಿತು.

ಇಲ್ಲಿನ ಬ್ರಹ್ಮಗಿರಿ ಕಾಲೋನಿಯ ನಿವಾಸಿಗಳಿಗೆ ಮಾಸಾಚರಣೆಯ ಮಹತ್ವವನ್ನು ತಿಳಿಸುವ ಮೂಲಕ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಜಾಗೃತಿ ಮೂಡಿಸಲಾಯಿತು.

ಮಲೇರಿಯಾ ಕಾಯಿಲೆ ಹರಡದಂತೆ ಗಮನ ಹರಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಆರೋಗ್ಯ ಶಿಕ್ಷಣದ ಬಗ್ಗೆ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಮಂಗಳ ಅವರು ಮಾಹಿತಿ ನೀಡಿದರು. ಈ ಸಂದರ್ಭ ಆಶಾ ಕಾರ್ಯಕರ್ತರು ಹಾಜರಿದ್ದರು.