ಮಡಿಕೇರಿ, ಜೂ. ೧೭ : ಅಂರ್ರಾಷ್ಟಿçÃಯ ೮ನೇ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಜಾಥಾಗೆ ನಗರದ ಗಾಂಧಿ ಮೈದಾನದಲ್ಲಿ ಶಾಸಕÀ ಕೆ.ಜಿ. ಬೋಪಯ್ಯ ಅವರು ಚಾಲನೆ ನೀಡಿದರು. ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಸಾಗಿತ್ತು. ಈ ಸಂದರ್ಭ ಯೋಗದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.
ಜಾಥಾದಲ್ಲಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ನಗರಸಭೆ ಅಧ್ಯಕ್ಷೆÀ ಅನಿತಾ ಪೂವಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಸಿ. ರೇಣುಕಾದೇವಿ ಇತರರು ಪಾಲ್ಗೊಂಡಿದ್ದರು.