ಶನಿವಾರಸಂತೆ, ಜೂ. ೧೬: ಸಮೀಪದ ಬೆಸೂರು ಗ್ರಾ.ಪಂ. ವ್ಯಾಪ್ತಿಯ ದೊಡ್ಡಭಂಡಾರ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ತಾ. ೧೮ರಂದು ಸೋಮವಾರಪೇಟೆ ತಹಶೀಲ್ದಾರ್ ಗೋವಿಂದ್ ರಾಜ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬೆಳಿಗ್ಗೆ ೧೦ ಗಂಟೆಗೆ ತಹಶೀಲ್ದಾರ್ ಮತ್ತು ಇತರೆ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸ ಲಿದ್ದಾರೆ ಎಂದು ಕಂದಾಯ ಪರಿವೀಕ್ಷಕ ಮನುಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿದ್ದಾಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ವೀರಾಜಪೇಟೆ ತಾಲೂಕು ಮಟ್ಟದ ಸಭೆಯನ್ನು ತಾ. ೧೮ ರಂದು ಬೆಳಿಗ್ಗೆ ೧೦ ಗಂಟೆಗೆ ಹಾಲುಗುಂದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಡಾ. ಯೋಗಾನಂದ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಾಲುಗುಂದ ಗ್ರಾಮದ ವ್ಯಾಪ್ತಿಗೆ ಸಂಬAಧಿಸಿದ ಸಮಸ್ಯೆಗಳ ಬಗ್ಗೆ ಅರ್ಜಿಗಳನ್ನು ಸಲ್ಲಿಸುವಂತೆ ವೀರಾಜಪೇಟೆ ತಾಲೂಕು ತಹಶೀಲ್ದಾರರು ಡಾ. ಯೋಗಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚೆಟ್ಟಳ್ಳಿ: ಜಿಲ್ಲಾಧಿಕಾರಿಗಳ ನಡಿಗೆ ಗ್ರಾಮಗಳ ಕಡೆಗೆ ಕಾರ್ಯಕ್ರಮವು ತಾ. ೧೮ ರಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅಧ್ಯಕ್ಷತೆಯಲ್ಲಿ ಚೆಟ್ಟಳ್ಳಿಯ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ನಡೆಯಲಿದೆ ಎಂದು ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ಶಿವಪ್ಪ ತಿಳಿಸಿದ್ದಾರೆ. ಪೂರ್ವಾಹ್ನ ೧೦ ಗಂಟೆಗೆ ಗ್ರಾಮ ವಾಸ್ತವ್ಯದ ಮೂಲಕ ಗ್ರಾಮಸ್ಥರ ಅಹವಾಲನ್ನು ಸ್ವೀಕರಿಸಿ ವಿಲೇವಾರಿಗಳ ಬಗ್ಗೆ ಪರಿಶೀಲಿಸಲಿದ್ದಾರೆ.