‘ಅಗ್ನಿಪಥ್' ಯೋಜನೆಗೆ ಬಿಹಾರದಲ್ಲಿ ಆಕ್ರೋಶ
ನವದೆಹಲಿ, ಜೂ. ೧೬: ಕೇಂದ್ರ ಸರ್ಕಾರದ ಮತ್ತೊಂದು ಯೋಜನೆ ವಿವಾದಕ್ಕೀಡಾಗಿದ್ದು, ಸೇನಾ ನೇಮಕಾತಿ ಕುರಿತ ‘ಅಗ್ನಿಪಥ್' ಯೋಜನೆಗೆ ಬಿಹಾರದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿ ರೈಲಿಗೆ ಬೆಂಕಿ ಹಚ್ಚಿದ್ದಾರೆ. ಅಗ್ನಿಪಥ್ ಯೋಜನೆ ಅಡಿಯಲ್ಲಿ ಸೇನೆಗೆ ‘ಅಗ್ನಿವೀರರ' (ಯೋಧರು) ನೇಮಕಾತಿ ನಡೆಸುವುದಾಗಿ ಕೇಂದ್ರ ಸರ್ಕಾರವು ಎರಡು ದಿನಗಳ ಹಿಂದಷ್ಟೇ ಪ್ರಕಟಿಸಿತ್ತು. ಆದರೆ ಈ ಯೋಜನೆಗೆ ಬಿಹಾರ ಮತ್ತು ರಾಜಸ್ಥಾನದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಉದ್ಯೋಗ ಭದ್ರತೆ ಮತ್ತು ಪಿಂಚಣಿ ವಿಚಾರವಾಗಿ ಕಳವಳ ವ್ಯಕ್ತಪಡಿಸಿರುವ ಉದ್ಯೋಗಾಕಾಂಕ್ಷಿಗಳು ರಸ್ತೆಗಿಳಿದು ಪ್ರತಿಭಟಿಸುತ್ತಿದ್ದಾರೆ. ದೇಶದ ಸಶಸ್ತç ಪಡೆಗಳು ತಾರುಣ್ಯಯುತವಾಗಿ ಇರುವಂತೆ ನೋಡಿಕೊಳ್ಳುವುದು ಹೊಸ ಯೋಜನೆಯ ಉದ್ದೇಶ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ, ನಾಲ್ಕು ವರ್ಷಗಳ ಕರ್ತವ್ಯ ಅವಧಿಯ ಮಿತಿ ಮತ್ತು ಬಳಿಕ ಶೇ. ೨೫ ರಷ್ಟು ಯೋಧರಿಗೆ ಮಾತ್ರ ಪೂರ್ಣಾವಧಿ ಸೇವೆಗೆ ಅವಕಾಶ ಕಲ್ಪಿಸುವ ಕ್ರಮದ ವಿರುದ್ಧ ಸೇನೆಗೆ ಸೇರುವ ಹಂಬಲವಿರುವ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ನಾವಡದಲ್ಲಿ ನ್ಯಾಯಾಲಯಕ್ಕೆ ತೆರಳುತ್ತಿದ್ದ ಬಿಜೆಪಿ ಶಾಸಕಿ ಅರುಣಾದೇವಿ ಅವರ ವಾಹನದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಶಾಸಕರು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಬಿಹಾರದ ಆರಾ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದ್ದು, ಯುವಜನರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ರೈಲಿನ ಬೋಗಿಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾಭುವಾ ಮತ್ತು ಛಾಪ್ರಾ ನಿಲ್ದಾಣಗಳಲ್ಲಿ ಸ್ಥಾಯಿ ಬೋಗಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಹಲವೆಡೆ ಕಂಪಾರ್ಟ್ಮೆAಟ್ಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದರಿಂದ ರೈಲ್ವೇ ಆಸ್ತಿಗೆ ಹಾನಿಯಾಗಿದೆ.
ಪೊಲೀಸ್ ಕೊರಳಪಟ್ಟಿ ಹಿಡಿದ ರೇಣುಕಾ ವಿರುದ್ಧ ಕೇಸ್
ಹೈದರಾಬಾದ್, ಜೂ. ೧೬: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬAಧಿಸಿದAತೆ ತೆಲಂಗಾಣದಲ್ಲಿ ನಡೆದ ಕಾಂಗ್ರೆಸ್ ನಾಯಕರ ಪ್ರತಿಭಟನೆ ವೇಳೆ ನಾಯಕಿ ರೇಣುಕಾ ಚೌದರಿ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಉದ್ಧಟತನ ತೋರಿರುವ ಘಟನೆ ವರದಿಯಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬAಧಿಸಿದAತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್ನ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟಿಸುತ್ತಿದೆ. ಈ ಸಂದರ್ಭ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಸಾರ್ವಜನಿಕವಾಗಿ ಉದ್ಧಟತನ ತೋರಿಸಿದ್ದಾರೆ. ಗುರುವಾರ ಹೈದರಾಬಾದ್ನಲ್ಲಿ ಪಕ್ಷದ ಪ್ರತಿಭಟನೆಯ ಸಂದರ್ಭದಲ್ಲಿ ಇತರ ಕಾರ್ಯಕರ್ತರನ್ನು ಪೊಲೀಸ್ ಸಿಬ್ಬಂದಿ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸ್ ಒಬ್ಬರನ್ನು ಸಾರ್ವಜನಿಕವಾಗಿ ಕಾಲರ್ನಿಂದ ಹಿಡಿದುಕೊಂಡು ವಾಗ್ವಾದ ನಡೆಸಿದ್ದಾರೆ. ನಂತರ ಅವರನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಪೊಲೀಸ್ ವ್ಯಾನ್ಗೆ ಎಳೆದೊಯ್ದಿದ್ದಾರೆ. ಮೂಲಗಳ ಪ್ರಕಾರ, ಪೊಲೀಸರ ಕೊರಳಪಟ್ಟಿ ಹಿಡಿದಿದಕ್ಕಾಗಿ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಸಂಸದೆ ರೇಣುಕಾ ಚೌದರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ ೩೫೩ ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
‘ಬುಲ್ಡೋಜರ್’ ಕ್ರಮ ಕಾನೂನಿನ ಪ್ರಕಾರ ಇರಬೇಕು:ಸುಪ್ರೀಂ
ನವದೆಹಲಿ, ಜೂ. ೧೬: ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸುವಾಗ ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದಿರುವ ಸುಪ್ರೀಂ ಕೋರ್ಟ್, ಈ ಕುರಿತು ದಿನಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಕಳೆದ ವಾರದ ಹಿಂಸಾಚಾರ ಪ್ರಕರಣದ ಆರೋಪಿಗಳ ಮನೆಗಳನ್ನು ಅಕ್ರಮವಾಗಿ ಕೆಡವಲಾಗಿದೆ ಎಂದು ಆರೋಪಿಸಿ, ಯೋಗಿ ಆದಿತ್ಯನಾಥ್ ಸರ್ಕಾರದ ಬುಲ್ಡೋಜರ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ‘ಬುಲ್ಡೋಜರ್ನ ಕ್ರಮ ಕಾನೂನಿನ ಪ್ರಕಾರ ಇರಬೇಕು’ಎಂದು ಹೇಳಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಯೋಗಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರೆ, ಅರ್ಜಿದಾರರ ಪರ ವಕೀಲ ಸಿ.ಯು. ಸಿಂಗ್ ಇದಕ್ಕೆ ತಡೆ ನೀಡಬೇಕೆಂದು ಒತ್ತಾಯಿಸಿದರು. ವಿಚಾರಣೆಯ ನಂತರ, ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ವೇಳೆ ಕಾನೂನಿನ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದರೊಂದಿಗೆ ಯುಪಿ ಸರ್ಕಾರ ಹಾಗೂ ಪ್ರಯಾಗ್ರಾಜ್ ಮತ್ತು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರಕ್ಕೆ ಈ ಬಗ್ಗೆ ೩ ದಿನಗಳಲ್ಲಿ ಉತ್ತರ ನೀಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಎಲ್ಲವನ್ನೂ ನ್ಯಾಯಯುತವಾಗಿ ಕಾಣಬೇಕು ಎಂದು ಹೇಳಿ ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.
ಪಾಕಿಸ್ತಾನದಲ್ಲಿ ಗಗನಕ್ಕೇರಿದ ತೈಲ ಬೆಲೆ
ಇಸ್ಲಾಮಾಬಾದ್, ಜೂ. ೧೬: ಪಾಕಿಸ್ತಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದ್ದು, ಗುರುವಾರ ಪೆಟ್ರೋಲ್ ಬೆಲೆ ಒಂದು ಲೀಟರ್ಗೆ ೨೪ ರೂಪಾಯಿ ಏರಿಕೆಯಾಗಿದ್ದು, ಈಗ ಪಾಕಿಸ್ತಾನದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ೨೦೯.೮೬ ರಿಂದ ೨೩೩.೮೯ ರೂ.ಗೆ ಏರಿಕೆಯಾಗಿದೆ. ಕಳೆದ ಮೂರು ದಿನಗಳಲ್ಲಿ ಮೂರನೇ ಬಾರಿ ಪೆಟ್ರೋಲ್ ಬೆಲೆ ಹೆಚ್ಚಿಸಲಾಗಿದೆ. ಇಸ್ಲಾಮಾಬಾದ್ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನದ ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್, ಹೊಸ ಬೆಲೆಗಳು ಜೂನ್ ೧೫ ರ ಮಧ್ಯರಾತ್ರಿಯಿಂದ ಜಾರಿಗೆ ಬಂದಿವೆ ಎಂದು ಹೇಳಿದ್ದಾರೆ. ಇನ್ನು ಮುಂದೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸಬ್ಸಿಡಿಗಳನ್ನು ಭರಿಸುವ ಸ್ಥಿತಿಯಲ್ಲಿ ಸರ್ಕಾರವಿಲ್ಲ ಎಂದು ಹೇಳಿದ್ದಾರೆ.
ಪ್ರತಿಭಟನೆ - ಕೈ ನಾಯಕರು ಪೊಲೀಸ್ ವಶಕ್ಕೆ
ಬೆಂಗಳೂರು, ಜೂ. ೧೬: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ನಡೆಸಿ ಮುತ್ತಿಗೆ ಹಾಕಲು ಮುಂದಾಗಿದ್ದು, ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾರೀ ಸಂಚಾರ ದಟ್ಟಣೆ ಸಮಸ್ಯೆ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಯಿತು. ಪೊಲೀಸರು ಬ್ಯಾರಿಕೇಡ್ ಹಾಕಿ ಕ್ವೀನ್ಸ್ ರಸ್ತೆಯನ್ನು ಬಂದ್ ಮಾಡಿದ್ದು, ಪ್ರತಿಭಟನಾಕಾರರನ್ನು ತುಂಬಲು ಕ್ವೀನ್ಸ್ ರಸ್ತೆಯಲ್ಲಿ ಬಿಎಂಟಿಸಿ ಬಸ್ಸನ್ನು ಪೊಲೀಸರು ಅಡ್ಡ ಹಾಕಿದ್ದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ರಾಜ ಭವನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ತಡೆದು, ವಶಕ್ಕೆ ಪಡೆದರು. ಬಳಿಕ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ವರದಿಗಳು ತಿಳಿಸಿವೆ. ಪ್ರತಿಭಟನೆ ವೇಳೆ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್, ಪರಮೇಶ್ವರ್, ಶಾಸಕ ರಿಜ್ವಾನ್ ಹರ್ಷದ್, ಮಾಜಿ ಸಚಿವ ಕೆ.ಜೆ. ಜಾರ್ಜ್, ಜಿ. ಪರಮೇಶ್ವರ್, ಪರಮೇಶ್ವರ್ ನಾಯಕ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಪ್ರಧಾನಿ ಆಗಮನದ ವೇಳೆ ಪ್ರತಿಭಟನೆ
ಬೆಂಗಳೂರು, ಜೂ. ೧೬: ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೈಸೂರಿಗ ಭೇಟಿ ನೀಡುತ್ತಿದ್ದು, ಈ ವೇಳೆ ರೈತರ ಬೆಳೆಗಳಿಗೆ ಬೆಲೆ ಖಾತರಿ ಶಾಸನ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ರಾಜ್ಯ ಕಬ್ಬು ಬೆಳೆಗಾರರ ಸಂಘವು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಈ ಕುರಿತು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಮಾತನಾಡಿ, ನಗರದ ನ್ಯಾಯಾಲಯ ಎದುರಿನ ಗಾಂಧಿ ಪುತ್ಥಳಿ ಬಳಿ ತರಕಾರಿ, ಹಣ್ಣು, ದವಸ, ಧಾನ್ಯ ಮಾರಾಟ ಮಾಡುವ ಮೂಲಕ ಪ್ರಧಾನಮಂತ್ರಿಗಳ ಗಮನ ಸೆಳೆಯಲಾಗುತ್ತದೆ. ಮೈಸೂರಿಗೆ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕ್ರಮಯೋಗಿಗಳ ಕಾಯಕ ದಿನವನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ.