ಮಡಿಕೇರಿ, ಜೂ. ೧೭: ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು. ಇದರಿಂದ ಆರ್ಥಿಕ ಚಟುವಟಿಕೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ತಾಲೂಕಿನ ಹೊದ್ದೂರು ಗ್ರಾ.ಪಂ.ಕಚೇರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಸ್ವರಾಜ್ ಸೌಧ’ ಸಭಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಜೊತೆಗೆ ಪ್ರವಾಸೋದ್ಯಮಕ್ಕೆ ಒತ್ತು ನೀಡಿದಾಗ ಆರ್ಥಿಕ ಚಟುವಟಿಕೆಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಇಲ್ಲಿ ನಿರ್ಮಾಣವಾಗಲಿರುವ ಅಂರ‍್ರಾಷ್ಟಿçÃಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು.

ಕೃಷಿ ಜೊತೆಗೆ ಪ್ರವಾಸೋದ್ಯಮಕ್ಕೆ ಒತ್ತು ನೀಡಿದಾಗ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರತೀ ವಾರ ೨೫ ಸಾವಿರಕ್ಕೂ ಹೆಚ್ಚು ಜನರು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಾರೆ. ಇದರಿಂದ ವ್ಯಾಪಾರ ವಹಿವಾಟು ಟ್ಯಾಕ್ಸಿ, ಹೊಟೇಲ್, ಹೀಗೆ ಆರ್ಥಿಕ ಚಟುವಟಿಕೆಗೆ ಅನುಕೂಲ ವಾಗಲಿದೆ. ಕೊಡಗು ಜಿಲ್ಲೆಯಲ್ಲಿ ಭೂಮಿಯ ಬೆಲೆಯು ಹೆಚ್ಚಳವಾಗಿದೆ.

ಕೊಡಗು ಪ್ರವಾಸೋದ್ಯಮ ತನ್ನದೇ ಆದ ಸ್ಥಾನ ಪಡೆಯುತ್ತಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಂರ‍್ರಾಷ್ಟಿçÃಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆದಲ್ಲಿ, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಅವಕಾಶಗಳು ದೊರೆಯಲಿವೆ. ಆದ್ದರಿಂದ ಎಲ್ಲರೂ ಕ್ರೀಡಾಂಗಣ ನಿರ್ಮಾಣಕ್ಕೆ ಕೈಜೋಡಿಸಬೇಕು.

ಕೊಡಗು ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆಗಿದೆ. ಜೊತೆಗೆ ರೂ. ೨೫ ಕೋಟಿ ವೆಚ್ಚದಲ್ಲಿ ೫೦ ಹಾಸಿಗೆಯ ‘ಕ್ರಿಟಿಕಲ್ ಕೇರ್ ಸೆಂಟರ್’ ನಿರ್ಮಾಣ ಆಗಲಿದೆ. ಈಗಾಗಲೇ ಮಂಗಳೂರು ರಸ್ತೆಯ ಪ್ರವಾಸಿ ಮಂದಿರದ ಕಟ್ಟಡವನ್ನು ಉಪಯೋಗಿಸಿಕೊಳ್ಳಲು ನಿರ್ಧರಿಸಲಾಗಿದೆ. ಇತ್ತೀಚೆಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಚೆನ್ನರಾಯಪಟ್ಟಣದಿಂದ ವೀರಾಜಪೇಟೆ ಮಾರ್ಗ ಹೆದ್ದಾರಿ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿತ್ತು. ಆ ನಿಟ್ಟಿನಲ್ಲಿ ಭೂ ಸಾರಿಗೆ ಸಚಿವರು ಅನುಮತಿ ನೀಡಿದ್ದಾರೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು, ಇಂಜಿನಿಯರಿAಗ್, ವಿಶ್ವವಿದ್ಯಾನಿಲಯ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಆಗಿವೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಪ್ಪಚ್ಚು ರಂಜನ್ ಅವರು ಹೇಳಿದರು.

ಜಿಲ್ಲೆಯಲ್ಲಿ ಆರೋಗ್ಯಕ್ಕೆ ಸಂಬAಧಿಸಿದAತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಸಹ ನಿರ್ಮಾಣ ಆಗಲಿದೆ. ಮುಂದಿನ ಎರಡು ವರ್ಷದಲ್ಲಿ ಎಲ್ಲಾ ಆರೋಗ್ಯ ಸೇವೆಗಳು ಕೊಡಗು ಜಿಲ್ಲೆಯಲ್ಲಿಯೇ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೊದ್ದೂರು ಗ್ರಾ.ಪಂ. ಕಚೇರಿ ನವೀಕರಣ ಮತ್ತು ಸಭಾಂಗಣ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗಿದೆ. ಹಾಗೆಯೇ ಹೊದ್ದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ರೂ. ೭೦ ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕರು ಹೇಳಿದರು.

‘ಹೊದ್ದೂರು ಗ್ರಾ.ಪಂ.ಗೆ ಜಾಗ ನೀಡಿರುವ ಜವಾಹರ್ ಕೋರನ ಮತ್ತು ಪದ್ಮ ದಂಪತಿ ಅವರಿಗೆ ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು. ಸಭಾಂಗಣಕ್ಕೆ ಅವರ ಕುಟುಂಬದವರ ಹೆಸರು ಬರೆಸುವಂತೆ ಶಾಸಕರು ಸಲಹೆ ನೀಡಿದರು.’

ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಮಾತನಾಡಿ, ಇಲ್ಲಿ ನಿರ್ಮಾಣವಾಗುವ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಅವಕಾಶ ಮಾಡಬೇಕು. ಯಾವುದೇ ಸಮಸ್ಯೆಗಳು ಇದ್ದಲ್ಲಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ರವಿ ಕುಶಾಲಪ್ಪ ಅವರು ಸಲಹೆ ಮಾಡಿದರು.

ಕೊಡಗು ಜಿಲ್ಲೆ ಶೇ. ೪೭ ರಷ್ಟು ಅರಣ್ಯ ಪ್ರದೇಶವನ್ನು ಹೊಂದಿದೆ. ಕಾಫಿ ತೋಟವೂ ಸೇರಿದರೆ ಶೇ. ೭೦ಕ್ಕೂ ಹೆಚ್ಚು ಅರಣ್ಯ ಕಾಣಬಹುದು. ಆ ನಿಟ್ಟಿನಲ್ಲಿ ಹಸಿರೇ ಉಸಿರು ಎಂಬುದನ್ನು ಅರ್ಥಮಾಡಿಕೊಂಡು ನದಿ ಮೂಲ ಸಂರಕ್ಷಿಸಬೇಕಿದೆ ಎಂದು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.

ಕೂಟಿಯಾಲ, ಕಡಮಕಲ್ಲು, ಪುಷ್ಪಗಿರಿ ಹೀಗೆ ಹಲವು ರಸ್ತೆಗಳನ್ನು ನಿರ್ಮಾಣ ಮಾಡಬೇಕಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದರು.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಮಾತನಾಡಿದರು. ತಾ.ಪಂ. ಮಾಜಿ ಅಧ್ಯಕ್ಷೆ ತೆಕ್ಕಡೆ ಶೋಭ ಮೋಹನ್ ಅವರು ಗ್ರಾ.ಪಂ. ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಹೊದವಾಡ ಪ್ರೌಢಶಾಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. ೧೦೦ ರಷ್ಟು ಫಲಿತಾಂಶ ಪಡೆದಿದ್ದು, ಈ ಹಿನ್ನೆಲೆ ಹೊದವಾಡ ಸರ್ಕಾರಿ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯರು ಮತ್ತು ಶಿಕ್ಷಕರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಹೊದ್ದೂರು ಗ್ರಾ.ಪಂ. ಅಧ್ಯಕ್ಷೆ ಪಿ.ಎ. ಕುಸುಮಾವತಿ, ಉಪಾಧ್ಯಕ್ಷೆ ಸರಸು, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಮೊಣ್ಣಪ್ಪ, ತಹಶೀಲ್ದಾರ್ ಪಿ.ಎಸ್. ಮಹೇಶ್, ಗ್ರಾ.ಪಂ. ಸದಸ್ಯರು, ಇತರರು ಇದ್ದರು. ವಾಟೆಕಾಡು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕರಾದ ಸೌಮ್ಯ ನಿರೂಪಿಸಿದರು. ಗ್ರಾ.ಪಂ. ಪಿಡಿಓ ಅಬ್ದುಲ್ಲಾ ಸ್ವಾಗತಿಸಿ, ವಂದಿಸಿದರು.