ಮಡಿಕೇರಿ, ಜೂ. ೧೬: ಕಾಂಗ್ರೆಸ್ ಪಕ್ಷದ ವತಿಯಿಂದ ತಾ. ೨೦ರಂದು ನಗರದ ಕೊಡವ ಸಮಾಜದಲ್ಲಿ ನವಸಂಕಲ್ಪ ಶಿಬಿರವನ್ನು ಆಯೋಜಿಸಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಪಕ್ಷದ ಮುಖಂಡ ವಿನಯಕುಮಾರ್ ಸೊರಕೆ ಶಿಬಿರ ಉದ್ಘಾಟಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಬಿರದಲ್ಲಿ ೪ ಗುಂಪುಗಳ ನ್ನಾಗಿ ವಿಂಗಡಿಸಿ, ವಿವಿಧ ಕ್ಷೇತ್ರಗಳಿಗೆ ಸಂಬAಧಿಸಿದAತಹ ಸಮಸ್ಯೆಗಳನ್ನು ಕುರಿತು ಚರ್ಚೆ ನಡೆಸಲಾಗುವುದು. ಮುಂದಿನ ಚುನಾವಣೆಯಲ್ಲಿ ಪ್ರಣಾಳಿಕೆ ರೂಪಿಸುವಲ್ಲಿ ಇದು ಸಹಕಾರಿಯಾಗಲಿದೆ ಎಂದರು.

ಪಕ್ಷದ ಮುಖಂಡ ಟಿ.ಪಿ.ರಮೇಶ್ ಮಾತನಾಡಿ, ಇದು ಪಕ್ಷದ ಸಂಘಟನೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದು. ಶಿಬಿರಕ್ಕೆ ಆಹ್ವಾನ ಪಡೆದವರೆಲ್ಲರೂ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿದರು.

ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರವು ರಾಹುಲ್ ಗಾಂಧಿ ಅವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದೆ. ಇದನ್ನು ಖಂಡಿಸಿ ತಾ. ೧೭ರಂದು (ಇಂದು) ಬೆಳಿಗ್ಗೆ ೧೧.೩೦ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು. ಪಕ್ಷದ ಮುಖಂಡರಾದ ಮುನೀರ್ ಅಹಮ್ಮದ್, ಗಿರೀಶ್, ಹಂಸ, ತೆನ್ನಿರಾ ಮೈನಾ ಇದ್ದರು.