ಮಡಿಕೇರಿ, ಜೂ. ೧೭: ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾ. ೨೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಮತ್ತು ಬೆಳಿಗ್ಗೆ ೧೧ ಗಂಟೆಗೆ ಕೊಡಗು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಾಧಿಕಾರದ ಸದಸ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರು ತಿಳಿಸಿದ್ದಾರೆ.