ಮಡಿಕೇರಿ, ಜೂ. ೧೭: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಮಂಗಳೂರು ಉಷಾ ಫೈರ್ ಸೇಫ್ಟಿ ಪ್ರೆöÊವೆಟ್ ಲಿಮಿಟೆಡ್ ಸಹಭಾಗಿತ್ವದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಂಯೋಜಕರು ಮತ್ತು ಸ್ವಯಂ ಸೇವಕರಿಗೆ ಜೀವರಕ್ಷಣಾ ಕೌಶಲ್ಯ ತರಬೇತಿ ತಾ. ೧೮ರಂದು (ಇಂದು) ನಡೆಯಲಿದೆ.
ಮೂರ್ನಾಡು ಗೌಡ ಸಮಾಜ ಸಭಾಂಗಣದಲ್ಲಿ ದಂತ ವೈದ್ಯ ಡಾ. ಮೇಚಿರ ಸುಭಾಷ್ ನಾಣಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ತಹಶೀಲ್ದಾರ್ ಪಿ.ಎಸ್. ಮಹೇಶ್ ಉದ್ಘಾಟಿಸಲಿದ್ದು, ಮಡಿಕೇರಿ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ರಕ್ಷಣಾ ಪರಿಕರಗಳನ್ನು ವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.