ಕೂಡಿಗೆ, ಜೂ. ೧೭: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದ ಕೂಡಿಗೆ ಕ್ರೀಡಾ ಪ್ರೌಢಶಾಲೆಯ ಒಳಾಂಗಣ ಕ್ರೀಡಾಂಗಣದಲ್ಲಿ ಜಿಮ್ನಾಸ್ಟಿಕ್, ಹಾಕಿ, ಅಥ್ಲೆಟಿಕ್ಸ್, ವಿಭಾಗಕ್ಕೆ ದಿನನಿತ್ಯ ಬೆಳಿಗ್ಗೆ ಮತ್ತು ಸಂಜೆ ಪ್ರತಿಭಾನ್ವಿತ ೧೨ ರಿಂದ ೧೬ ವಯಸ್ಸಿನ ಬಾಲಕ, ಬಾಲಕಿಯರಿಗೆ ಉಚಿತವಾಗಿ ಕ್ರೀಡಾ ತರಬೇತಿಯನ್ನು ನೀಡಲಾಗುತ್ತಿದೆ ಇದರ ಸದುಪಯೋಗವನ್ನು ಬಳಕೆ ಮಾಡಿಕೊಳ್ಳುವಂತೆ ಕ್ರೀಡಾ ಶಾಲೆ ಆಡಳಿತಾಧಿಕಾರಿ ಜಯರಾಮ್ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿನ ಬಾಲಕ ಬಾಲಕಿಯರಿಗೆ ಕ್ರೀಡಾ ಪ್ರತಿಭೆಗೆ ಅವಕಾಶವನ್ನು ಕಲ್ಪಿಸುವ ಹಿತದೃಷ್ಟಿಯಿಂದ ಉಚಿತವಾಗಿ ಕ್ರೀಡಾ ಶಾಲೆಯ ಮೈದಾನದಲ್ಲಿ ತರಬೇತಿಯನ್ನು ನೀಡುತ್ತಿದ್ದು, ಆಸಕ್ತ ಕ್ರೀಡಾಪಟುಗಳು ತರಬೇತಿಯನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೪೮೩೬೨೯೨೧೬ ಅನ್ನು ಸಂಪರ್ಕಿಸುವAತೆ ಕೋರಿದ್ದಾರೆ.