ಚೆಟ್ಟಳ್ಳಿ, ಜೂ. ೧೮: ಲೈನ್‌ಮನೆಗಳಲ್ಲಿ ವಾಸಿಸುವವರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತಿತರ ಅಗತ್ಯ ದಾಖಲೆಗಳು ಇಲ್ಲದಿದ್ದಲ್ಲಿ ಗ್ರಾಮ ಒನ್ ಕೇಂದ್ರ ಬಳಸಿಕೊಂಡು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿ ಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಕರೆ ನೀಡಿದರು.

ಚೆಟ್ಟಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ತಾಲೂಕಿನ ಎಲ್ಲಾ ಅಧಿಕಾರಿಗಳ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಜಿಲ್ಲಾಧಿಕಾರಿಗಳ ಜೊತೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿರು ವುದರಿಂದ ತಮ್ಮ ಸಮಸ್ಯೆಗಳನ್ನು ನೇರವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಹೇಳಿ ಕೊಳ್ಳಬಹುದಾಗಿದೆ. ಜಿಲ್ಲಾಮಟ್ಟದ ಅಧಿಕಾರಿಗಳು ತಿಂಗಳಿಗೊಮ್ಮೆ ಗ್ರಾಮಗಳಿಗೆ ತೆರಳಿ ಸಮಸ್ಯೆಯನ್ನು ಅರಿತಾಗ ಬಹಳಷ್ಟು ಸಮಸ್ಯೆಗಳು ಪರಿಹಾರವಾಗಲಿದೆ ಎಂದು ಹೇಳಿದ ಅವರು, ಸಮಸ್ಯೆಗಳಿಗೆ ಪರಿಹಾರ ನೀಡಬಹುದಾದರೆ ಈ ಹಂತದಲ್ಲಿಯೇ ಪರಿಹರಿಸಲಾಗುವುದು. ಸಾರ್ವಜನಿಕ ರಸ್ತೆ, ಭೂ ದಾಖಲಾತಿಗಳು, ಪಟ್ಟೆದಾರ ಸಮಸ್ಯೆ, ಆನೆ ಹಾವಳಿ ನಿಯಂತ್ರಣ, ಹೀಗೆ ಹತ್ತು ಹಲವಾರು ಸಮಸ್ಯೆಗಳು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಹೆಚ್ಚಾಗಿ ಕೇಳಿಬಂದವು.

ಗ್ರಾಮಸ್ಥರಾದ ಮಾದಯ್ಯ ಅವರು ಮಾತನಾಡಿ ಚೆಟ್ಟಳ್ಳಿ, ಹೊಸ್ಕೇರಿ, ಮರಗೋಡು ಭಾಗದ ಲಿಂಕ್ ರಸ್ತೆಯನ್ನು ಸರಿಪಡಿಸಿ ಕೊಡಬೇಕಾಗಿ ಹಲವಾರು ಬಾರಿ ಮನವಿ ಮಾಡಿದರೂ ಸಹ ಯಾವುದೇ ರೀತಿಯಾದ ಕ್ರಮ ಕೈಗೊಂಡಿಲ್ಲ, ಆ ನಿಟ್ಟಿನಲ್ಲಿ ಸಂಬAಧಪಟ್ಟ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಸರಿಪಡಿಸಿ ಕೊಡಬೇಕಾಗಿ ಮನವಿ ಮಾಡಿದರು.

ಸಂಬAಧಪಟ್ಟ ಅಧಿಕಾರಿ ಮಾತನಾಡಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ರಸ್ತೆಯ ಕಾಮಗಾರಿ ನಡೆಸಲಾಗುವುದು. ಮಳೆಗಾಲ ಪ್ರಾರಂಭವಾಗಿರು ವುದರಿಂದ ಕಾಮಗಾರಿಯನ್ನು ಮಳೆಗಾಲ ಮುಗಿದ ನಂತರ ಮಾಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಂಬAಧಪಟ್ಟ ಅಧಿಕಾರಿ ಗಳು ಕೂಡಲೇ ಸ್ಥಳ ಪರಿಶೀಲನೆ ಮಾಡುವಂತೆ ಸೂಚಿಸಿದರು.(ಮೊದಲ ಪುಟದಿಂದ) ರೀತಿಯಾದ ದಾಖಲಾತಿಗಳು ಇರುವುದಿಲ್ಲ ಅದನ್ನು ಸರಿಪಡಿಸಿಕೊಡುವಂತೆ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಭೂಮಿ ಸಂಘದ ಹೆಸರಿನಲ್ಲಿದ್ದರೆ ಅದಕ್ಕೆ ದಾಖಲೆಗಳನ್ನು ನೀಡಲಾಗುವುದು. ಜಾಗದ ಸಮಸ್ಯೆಯನ್ನು ಪರಿಶೀಲಿಸಿ ಪರಿಹರಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ಸ್ಥಳೀಯರಾದ ಬೋಪಯ್ಯ ಮಾತನಾಡಿ ಈ ಭಾಗದಲ್ಲಿ ಆನೆ ಹಾವಳಿ ಹೆಚ್ಚಿದ್ದು, ತೋಟದಲ್ಲಿ ಕೆಲಸ ಮಾಡಲು ಸಹ ಕಷ್ಟವಾಗಿದೆ. ಸಂಬAಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸುವಂತೆ ಒತ್ತಾಯಿಸಿದರು.

ಇದಕ್ಕೆ ಧ್ವನಿಗೂಡಿಸಿದ ಸಾರ್ವಜನಿಕರು ಅರಣ್ಯ ಪ್ರದೇಶದಲ್ಲಿ ಬೆಳೆದ ತೇಗದ ಮರವನ್ನು

ಸ್ಥಳೀಯ ಪೂವಯ್ಯ ಮಾತನಾಡಿ ಮಡಿಕೇರಿ ಚೆಟ್ಟಳ್ಳಿ ರಸ್ತೆಬದಿಯಲ್ಲಿ ಅವೈಜ್ಞಾನಿಕವಾಗಿ ತಡೆಗೋಡೆ ನಿರ್ಮಾಣ ಹಾಗೂ ಚರಂಡಿ ಕಾಮಗಾರಿಗಳನ್ನು ಮಾಡಲಾಗಿದೆ. ಇದನ್ನು ಕೂಡಲೇ ಪರಿಶೀಲಿಸುವಂತೆ ಅವರು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು ಅವರು ೨೦೧೮-೧೯ರಲ್ಲಿ ಬಿದ್ದ ಭಾರೀ ಮಳೆಯಿಂದ ಹಾನಿಯುಂಟಾದ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸಲಾಗಿದೆ. ಅವೈಜ್ಞಾನಿಕವಾಗಿ ಯಾವುದೇ ಕಾಮಗಾರಿಗಳು ನಡೆದಿರುವುದಿಲ್ಲ. ಮುಂದಿನ ದಿನಗಳಲ್ಲಿ ಸಾರ್ವಜನಿಕ ರೊಂದಿಗೆ ಸ್ಥಳಕ್ಕೆ ಭೇಟಿ ಮಾಡಿ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅವರು ಹೇಳಿದರು.

ಗ್ರಾಮಸ್ಥರೊಬ್ಬರು ಮಾತನಾಡಿ ಭೂ ದಾಖಲೆಯಲ್ಲಿ ಪಟ್ಟೇದಾರ ಸಮಸ್ಯೆಗಳು ಕಂಡುಬರುತ್ತಿದ್ದು, ಇದರಿಂದ ಸರ್ಕಾರದ ಯೋಜನೆ ಗಳನ್ನು ಪಡೆಯುವಲ್ಲಿ ರೈತರು ವಂಚಿತರಾಗುತ್ತಿದ್ದಾರೆ. ಆದ್ದರಿಂದ ಈ ಸಮಸ್ಯೆಗಳನ್ನು ಪರಿಹರಿಸಿಕೊಡುವಂತೆ ಮನವಿ ಮಾಡಿದರು.

ಬಲ್ಲಾರಂಡ ಮಣಿಉತ್ತಪ್ಪ ಮಾತನಾಡಿ, ಸಹಕಾರಿ ಸಂಘದ ಜಾಗಕ್ಕೆ ಯಾವುದೇ

ತೆರವುಗೊಳಿಸಬೇಕು, ಆಹಾರ ಬೆಳೆಗಳನ್ನು ಅರಣ್ಯದಲ್ಲಿ ಬೆಳೆಯುವಂತೆ ತಿಳಿಸಿದರು. ಆನೆ ಹಾವಳಿಯನ್ನು ತಡೆಗಟ್ಟಲು ಕಂದಕಗಳನ್ನು ನಿರ್ಮಿಸಿದರು ಕೂಡ ಯಾವುದೇ ರೀತಿಯ ಪ್ರಯೋಜನಗಳು ಆಗುತ್ತಿಲ್ಲ ಹಾಗೂ ಅರಣ್ಯ ಪ್ರದೇಶದಲ್ಲಿ ಏರ್ ಸೀಡಿಂಗ್‌ಗಳನ್ನು ಮಾಡುವಂತೆ ಮನವಿ ಮಾಡಿದರು.

ಗ್ರಾಮಸ್ಥರೊಬ್ಬರು ಮಾತನಾಡಿ ಜಮ್ಮಾ ಸಮಸ್ಯೆ, ಪೌತಿ ಖಾತೆ ಸಮಸ್ಯೆಗಳು ರೈತರಿಗೆ ಒಂದು ದೊಡ್ಡ ಸಮಸ್ಯೆಯಾಗಿದೆ. ಇದರಿಂದ ರೈತರು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಉಪವಿಭಾಗಧಿಕಾರಿ ಯತೀಶ್ ಉಲ್ಲಾಳ್ ಮಾತನಾಡಿ, ಪಟ್ಟೆದಾರ ಸಮಸ್ಯೆಗಳು ಜಿಲ್ಲೆಯಲ್ಲಿ ಹೆಚ್ಚಿದೆ. ಆ ನಿಟ್ಟಿನಲ್ಲಿ ವಿಭಾಗ ಪತ್ರಗಳನ್ನು ಮಾಡುವಾಗ ದಾಖಲೆಗಳನ್ನು ಪರಿಶೀಲನೆ ಮಾಡಿ ಕಾನೂನುಬದ್ಧವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಅವರು ಮಾತನಾಡಿ ಪಟ್ಟೆದಾರ ಮತ್ತು ಪೌತಿ ಖಾತೆಗೆ ಸಂಬAಧಿಸಿದAತೆ ಹಲವಾರು ಸಮಸ್ಯೆಗಳು ಜಿಲ್ಲೆಯಲ್ಲಿದೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕುಟುಂಬಸ್ಥರ ಸ್ವಯಂ ಘೋಷಣೆಯೊಂದಿಗೆ ಈಗಾಗಲೇ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಗ್ರಾಮಸ್ಥರು ಮಾತನಾಡಿ ಈ ಭಾಗದಲ್ಲಿ ಪದವಿ ಪೂರ್ವ ಕಾಲೇಜು ಇಲ್ಲದಿರುವುದರಿಂದ ಪದವಿಪೂರ್ವ ಕಾಲೇಜನ್ನು ನಿರ್ಮಿಸಿಕೊಡುವಂತೆ ಗಮನ ಸೆಳೆದರು.

ಹಲವರ ಪಡಿತರ ಚೀಟಿ ರದ್ದಾಗಿದ್ದು ಪಡಿತರ ಚೀಟಿಯನ್ನು ಒದಗಿಸಿ ಕೊಡುವಂತೆ ಮನವಿ ಮಾಡಿದರು. ಪಿಂಚಣಿ ವ್ಯವಸ್ಥೆಯಿಂದ ವಂಚಿತರಾದವರಿಗೆ ಪಿಂಚಣಿ ವ್ಯವಸ್ಥೆ ಮಾಡಿಕೊಡಬೇಕು. ಮೊಬೈಲ್ ನೆಟ್ವರ್ಕ್ ಸಮಸ್ಯೆ, ಸಾಲ ಮನ್ನಾಕ್ಕೆ ಸಂಬAಧಿಸಿದAತೆ ಹಲವಾರು ಸಮಸ್ಯೆಗಳನ್ನು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು.

ಮಾಸಾಶನ ಪತ್ರ ಹಾಗೂ ಸರ್ಕಾರಿ ಸ್ಮಶಾನ ಭೂಮಿ ಮಂಜೂರಾತಿ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ತಹಶೀಲ್ದಾರ್ ಪ್ರಕಾಶ್, ಜಿಲ್ಲಾಮಟ್ಟದ ಅಧಿಕಾರಿಗಳು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮಸ್ಥರು ಇತರರು ಇದ್ದರು.