ಸೋಮವಾರಪೇಟೆ, ಜೂ. ೧೮: ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯನ್ನು ಆಚರಿಸುವ ಸಂಬAಧ ಇಲ್ಲಿನ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ತಹಶೀಲ್ದಾರ್ ಗೋವಿಂದರಾಜು ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ೮ನೇ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯನ್ನು ತಾಲೂಕು ಮಟ್ಟದಲ್ಲಿ ನಡೆಸುವ ಸಂಬAಧ ಜಿಲ್ಲಾಧಿಕಾರಿಗಳ ಕಚೇರಿಯಿಂದ ಆದೇಶ ಬಂದಿದ್ದು, ಅದರಂತೆ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಯೋಗ ಕೇಂದ್ರಗಳನ್ನು ಒಳಗೊಂಡAತೆ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಬೇಕಿದೆ ಎಂದರು.

ಆಯುಷ್ ಇಲಾಖೆಯ ಸಹಭಾಗಿತ್ವದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಆರ್ಟ್ ಆಫ್ ಲಿವಿಂಗ್, ನಿರಂತರ ಯೋಗ ಕೇಂದ್ರ, ರೋಟರಿ, ಲಯನ್ಸ್, ಜೇಸೀ ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳನ್ನು ಕಾರ್ಯಕ್ರಮದಲ್ಲಿ ಜೋಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಹೇಳಿದರು.

ಯೋಗ ದಿನಾಚರಣೆ ಅಂಗವಾಗಿ ತಾ. ೨೦ರಂದು ಪೂರ್ವಾಹ್ನ ೧೦.೩೦ಕ್ಕೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಒಳಗೊಂಡAತೆ ಯೋಗ ಜಾಥಾ ನಡೆಸಲಾಗುವುದು. ತಾ. ೨೧ರಂದು ಬೆಳಿಗ್ಗೆ ೬.೧೫ರಿಂದ ಜೂನಿಯರ್ ಕಾಲೇಜು ಬಳಿಯಿರುವ ಟರ್ಫ್ ಹಾಕಿ ಮೈದಾನದಲ್ಲಿ ಸಾಮೂಹಿಕ ಯೋಗ ನಡೆಸಲಾಗು ವುದು. ಒಂದು ವೇಳೆ ಮಳೆ ಇದ್ದರೆ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದು ಗೋವಿಂದರಾಜು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವವರು ಯೋಗ ಮ್ಯಾಟ್‌ಗಳನ್ನು ತರಬೇಕು. ಬಿಳಿ ಬಣ್ಣದ ಟೀ ಶರ್ಟ್ ಮತ್ತು ಯೋಗಕ್ಕೆ ಅನುಕೂಲವಾಗುವ ಪ್ಯಾಂಟ್ ಧರಿಸಬೇಕು. ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಎಲ್ಲಾ ಇಲಾಖಾಧಿಕಾರಿಗಳು ತಪ್ಪದೇ ಹಾಜರಾಗಬೇಕೆಂದು ತಹಶೀಲ್ದಾರ್ ಸೂಚಿಸಿದರು.

ಸಭೆಯಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್, ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿ ಸ್ಮಿತಾ, ಆರ್ಟ್ ಆಫ್ ಲಿವಿಂಗ್ ಶಿಕ್ಷಕಿ ರಾಗಿಣಿ, ನಿರಂತರ ಯೋಗ ಕೇಂದ್ರದ ಶಿಕ್ಷಕ ಕಿಬ್ಬೆಟ್ಟ ಗಣೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.