*ಗೋಣಿಕೊಪ್ಪ, ಜೂ. ೧೮: ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಗೇರಿ ಹಾಡಿಯ ಜನಪದ ಕಲಾವಿದ ಜೆ.ಕೆ. ಗಣಪತಿ ಯವರಿಗೆ ಹಾರ್ಮೋನಿಯಂ ಪೆಟ್ಟಿಗೆಯನ್ನು ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ, ಶಾಸಕ ಕೆ.ಜಿ. ಬೋಪಯ್ಯ ಅವರು ವಿತರಿಸಿದರು.

ಆಶ್ರಮ ಶಾಲೆಯಲ್ಲಿ ನಿಟ್ಟೂರು ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ವನವಾಸಿ ಕಲ್ಯಾಣ ಆಶ್ರಮದ ಯೋಜನೆಯಲ್ಲಿ ಹಾರ್ಮೋನಿಯಂ ಪೆಟ್ಟಿಗೆಯನ್ನು ನೀಡಲಾಯಿತು.

ಬಾಳೆಲೆ ವಿಜಯಲಕ್ಷಿö್ಮ ಪದವಿಪೂರ್ವ ಕಾಲೇಜಿನ ಮುಖ್ಯ ಶಿಕ್ಷಕ ಚಂದ್ರಶೇಖರ್ ಅವರು ಹಾರ್ಮೋನಿಯಂ ನುಡಿಸುವ ಮೂಲಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಆಶ್ರಮ ಶಾಲೆಯ ವಿದ್ಯಾರ್ಥಿಗಳು ಕಾಡುಮಕ್ಕಳ ಸಂಸ್ಕೃತಿ ಬಿಂಬಿಸುವ ನೃತ್ಯ ಮಾಡಿ ಶಾಸಕರ ಹಾಗೂ ನೆರೆದ ಅತಿಥಿಗಳನ್ನು ಸಾಂಸ್ಕೃತಿಕವಾಗಿ ರಂಜಿಸಿದರು.

ಈ ಸಂದರ್ಭದಲ್ಲಿ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ, ಉಪಾಧ್ಯಕ್ಷೆ ಪಡಿಞರಂಡ ಕವಿತಾ ಪ್ರಭು, ಬಾಳೆಲೆ ವಿಜಯಲಕ್ಷಿö್ಮ ವಿದ್ಯಾ ಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಗೌರವ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ವನವಾಸಿ ಕಲ್ಯಾಣ ಸಂಸ್ಥೆ ಅಧ್ಯಕ್ಷ ಚಕ್ಕೇರ ಮನು ಕಾವೇರಪ್ಪ, ವನವಾಸಿ ಕಲ್ಯಾಣ ಸಂಸ್ಥೆಯ ರಮೇಶ್ ಭಟ್, ವನವಾಸಿ ಕಲ್ಯಾಣ ಕೊಡಗು ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಹರೀಶ್, ಕಾರ್ಯದರ್ಶಿ ಪಡಿಞರಂಡ ಪ್ರಭುಕುಮಾರ್, ಖಚಾಂಚಿ ಪಾಲೆಕಂಡ ಮನು, ವನವಾಸಿ ಕಲ್ಯಾಣ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಪ್ರಕಾಶ್, ಬೆಳಕು ಫೌಂಡೇಶನ್ ಪ್ರತಿಮಾ, ನಿಟ್ಟೂರು ಗ್ರಾಮ ಪಂಚಾಯಿತಿ ಸದಸ್ಯರು ಗಳಾದ ಕಾಟಿಮಾಡ ಶರೀನ್ ಮುತ್ತಣ್ಣ, ಅಮ್ಮುಣಿ, ಅಮ್ಮಯ್ಯ ವೀರಾಜಪೇಟೆ ತಾಲೂಕು ಪರಿಶಿಷ್ಟ ವರ್ಗಗಳ ಸಮಗ್ರ ಕಲ್ಯಾಣಾಧಿಕಾರಿ ಗುರುಶಾಂತಪ್ಪ, ತಿತಿಮತಿ ಗ್ರಾಮ ಪಂಚಾಯಿತಿ ಸದಸ್ಯ ಅನೂಪ್ ಕುಮಾರ್ ಹಾಜರಿದ್ದರು.