ಸೋಮವಾರಪೇಟೆ, ಜೂ.೧೮: ತಾಲೂಕು ಅಕ್ರಮ ಸಮಿತಿ ಸಭೆ ತಾ. ೨೧ರಂದು ಪೂರ್ವಾಹ್ನ ೧೧ ಗಂಟೆಗೆ ಶಾಸಕ ಅಪ್ಪಚ್ಚು ರಂಜನ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಭೆಯಲ್ಲಿ ಸಮಿತಿ ಸದಸ್ಯರು, ಕಂದಾಯ ಇಲಾಖಾಧಿಕಾರಿಗಳು ಭಾಗವಹಿಸಿ ಅರ್ಜಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಹಶೀಲ್ದಾರ್ ಗೋವಿಂದರಾಜು ತಿಳಿಸಿದ್ದಾರೆ.