ಮಡಿಕೇರಿ, ಜೂ. ೧೮: ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ ವನ್ನು ಬಳಸಿಕೊಂಡು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಯವರನ್ನು ವಿಚಾರಣೆ ನಡೆಸುತ್ತಿ ರುವುದನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಈ ಬಗ್ಗೆ ಆಕ್ಷೇಪದೊಂದಿಗೆ ವಿವಿಧ ಘೋಷಣೆಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಜಮಾ ಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಪ್ರಮುಖರು ಕೇಂದ್ರ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಅವರು ಮಾತನಾಡಿ, ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದ್ದು, ರಾಹುಲ್ ಗಾಂಧಿಗೆ ವಿನಾಕಾರಣ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ ಅವರು ನ್ಯಾಷನಲ್ ಹೆರಾಲ್ಡ್ ವಿವಾದ ಮುಗಿದ ಅಧ್ಯಾಯವಾಗಿದ್ದು, ಜನರ ದಿಕ್ಕು ತಪ್ಪಿಸಲು ಕೇಂದ್ರ ಸರ್ಕಾರ ಇಡಿ ವಿಚಾರಣೆ ನಡೆಸುತ್ತಿದೆ. ಇಡಿ ವಿಚಾರಣೆ ಕೈ ಬಿಡದಲ್ಲಿ ಹೋರಾಟ ನಡೆಸುವುದಾಗಿ ಹೇಳಿದರು.
ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ನಂಜುAಡೇ ಗೌಡರ ಅವರ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಯಿತು. ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಟಿ.ಪಿ. ರಮೇಶ್, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ. ನಂದಕುಮಾರ್, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ಪಟ್ಟಡ ರಂಜಿ ಪೂಣಚ್ಚ, ಮೀದೇರಿರ ನವೀನ್, ಮುಖಂಡರುಗಳಾದ ಎಂ.ಎ. ಉಸ್ಮಾನ್, ವಿ.ಪಿ. ಸುರೇಶ್, ಸುಜು ತಿಮ್ಮಯ್ಯ, ಟಿ.ಎಂ. ಅಯ್ಯಪ್ಪ, ಯಾಕುಬ್, ಅಂಬೇಕಲ್ ಕುಶಾಲಪ್ಪ, ಚುಮ್ಮಿದೇವಯ್ಯ, ಪ್ರಕಾಶ್ ಆಚಾರ್ಯ, ಪುಲಿಯಂಡ ಜಗದೀಶ್, ಮಂಡೀರ ಸದಾ ಮುದ್ದಪ್ಪ, ಕಟ್ರತನ ವೆಂಕಟೇಶ್, ಪ್ರಭುರೈ, ಹೊಸೂರು ಸೂರಜ್, ರವೂಫ್ ಶೇಖ್, ಲಕ್ಷಿö್ಮಪ್ರಸಾದ್ ಪೆರ್ಲ, ನೆರವಂಡ ಉಮೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಹಾನಗಲ್ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.