ಪೊನ್ನಂಪೇಟೆ, ಜೂ. ೧೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಳ್ಳಿಗಟ್ಟು ಗ್ರಾಮದಲ್ಲಿ ಶಾಶ್ವತ ಶಾರೀರಿಕ ಅಸಹಾಯಕತೆಯಿಂದ ಬಳಲುತ್ತಿದ್ದ ಚಂದ್ರ ಎಂಬವರಿಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಆದೇಶದ ಮೇರೆಗೆ ವಾಟರ್ ಬೆಡ್ಡನ್ನು ಮಂಜೂರು ಮಾಡಲಾಗಿದ್ದು, ವಾಟರ್ ಬೆಡ್ಡನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ, ವೀರಾಜಪೇಟೆ ತಾಲೂಕು ಯೋಜನಾಧಿಕಾರಿ ದಿನೇಶ್ ವಿತರಿಸಿದರು.
ಈ ಸಂದರ್ಭ ವಲಯ ಮೇಲ್ವಿಚಾರಕ ನರಸಿಂಹಮೂರ್ತಿ, ಸ್ಥಳೀಯ ಸೇವಾ ಪ್ರತಿನಿಧಿ ರೋಹಿಣಿ ಹಾಗೂ ಸಂಘದ ಸದಸ್ಯರು ಇದ್ದರು.