ಮಡಿಕೇರಿ, ಜೂ. ೨೦: ಕೊಡಗು ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನ ಉತ್ತಮವಾಗಿದ್ದು, ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಿಸು ವಂತೆ ಕೇಂದ್ರ ಸರ್ಕಾರದ ನೀತಿ ಆಯೋಗದ ಉಪ ಸಲಹೆಗಾರರು ಮತ್ತು ಜಲಶಕ್ತಿ ಅಭಿಯಾನದ ನೋಡಲ್ ಅಧಿಕಾರಿ ಆಗಿರುವ ತ್ಯಾಗರಾಜ್ ಸಲಹೆ ನೀಡಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಜಲಶಕ್ತಿ ಅಭಿಯಾನದ ಸಭೆ ನಡೆಸಿ ಅವರು ಮಾತನಾಡಿದರು.

ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವುದರಿಂದ ಅಂತರ್ಜಲ ಪ್ರಮಾಣ ಉತ್ತಮವಾಗಿದೆ. ಜೊತೆಗೆ ಜಲಶಕ್ತಿ ಅಭಿಯಾನವೂ ಮಳೆ ನೀರಿನ ಪುನರ್ಬಳಕೆಗೆ ಪೂರಕವಾಗಿದೆ, ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಜಲಶಕ್ತಿ ಅಭಿಯಾನದ ಪ್ರಗತಿ ಉತ್ತಮವಾಗಿದ್ದು, ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಟಾನಿಸುವಂತೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಮಾತನಾಡಿ, ಜಲಶಕ್ತಿ ಅಭಿಯಾನವನ್ನು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನೀರಿನ ಮೂಲಗಳನ್ನು ಮನರೇಗಾ, ಪಿ.ಆರ್.ಇ.ಡಿ, ಸಣ್ಣ ನೀರಾವರಿ, ಬೃಹತ್ ನೀರಾವರಿ, ಕೃಷಿ, ತೋಟಗಾರಿಕೆ ಮತ್ತು ಸಾಮಾಜಿಕ ಅರಣ್ಯ ಇಲಾಖೆಯಡಿಯಲ್ಲಿ ಪುನಶ್ಚೇತನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಮಾತನಾಡಿ ಮನರೇಗಾ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ೩ ಕಲ್ಯಾಣಿಗಳನ್ನು ಪುನಶ್ಚೇತನ ಗೊಳಿಸಲಾಗಿದೆ. ಇದರೊಂದಿಗೆ ಇಂಗುಗುAಡಿಗಳ ನಿರ್ಮಾಣ ಮಾಡಲಾಗಿದೆ. ಜನಸಾಮಾನ್ಯರಿಗೆ ಮಳೆ ನೀರಿನ ಸಂಗ್ರಹ ಮತ್ತು ಅದರ ಮರು ಬಳಕೆಯ ಬಗ್ಗೆ ಹಲವು ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿದೆ ಎಂದು ತಿಳಿಸಿದರು.

ಜಿ.ಪಂ. ಉಪಕಾರ್ಯದರ್ಶಿ ಲಕ್ಷಿö್ಮ ಪಿ. ಮಾತನಾಡಿ ೨೦೨೧ ರಿಂದ ಈ ವರೆಗೂ ಜಲಶಕ್ತಿ ಅಭಿಯಾನ ದಡಿಯಲ್ಲಿ ೪,೦೫೧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಖ್ಯವಾಗಿ ಜಿಲ್ಲೆಯಲ್ಲಿ ನಾಲಾ ಪುನಶ್ಚೇತನಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಒಂದು ಸಾವಿರಕ್ಕೂ ಅಧಿಕ ನಾಲಾ ಪುನಶ್ಚೇತನ ಮಾಡಲಾಗಿದೆ. ಈ ನಿಟ್ಟಿನಲ್ಲಿ ಪ್ರವಾಹ ನಿಯಂತ್ರಣದಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.

ಇದರೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಮಳೆ ನೀರುಕೊಯ್ಲು ಸಹ ಮಾಡಲಾಗಿದೆ. ಮನರೇಗಾ ಮತ್ತು ಕೃಷಿ ಇಲಾಖೆಯ ಸಹಯೋಗ ದೊಂದಿಗೆ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲಾಗಿದೆ. ಕಾಫಿ ತೋಟಗಳಲ್ಲಿ ನೀರಿನ ಬಳಕೆ ಮತ್ತು ಮಣ್ಣಿನ ಸವಕಳಿ ತಡೆಯುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಿದೆ. ಇದರೊಂದಿಗೆ ಭಾರತ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟಾರೆ ೭೭ ಕೆರೆಗಳನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲು ಕ್ರಮ ವಹಿಸಲಾಗಿದೆ. ೧೬ ಕೆರೆಗಳ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಆಗಸ್ಟ್ ೧೫ ರಂದು ಉದ್ಘಾಟನೆಗೊಳ್ಳಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಲಶಕ್ತಿ ಅಭಿಯಾನ ತಂಡದ ವಿಜ್ಞಾನಿ ಅನುರಾಧ ಸೊನಾವನೆ, ಜಂಟಿ ಕೃಷಿ ನಿರ್ದೇಶಕಿ ಶಬಾನ ಎಂ.ಶೇಖ್, ಪಿ.ಆರ್.ಇ.ಡಿ ಇ.ಇ ನಾಗೇಂದ್ರ, ಎ.ಇ.ಇ ಜವರೇಗೌಡ, ಸಣ್ಣ ನೀರಾವರಿ ಇಲಾಖೆಯ ಎ.ಇ.ಇ ಕುಮಾರಸ್ವಾಮಿ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಪ್ರಮೋದ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂರ್ಣಿಮ, ವೀರಾಜಪೇಟೆ ತಾ.ಪಂ. ಇಒ ಅಪ್ಪಣ್ಣ, ಹಿರಿಯ ಭೂವಿಜ್ಞಾನಿ ಸೌಮ್ಯ, ಜಿ.ಪಂ. ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಮನರೇಗಾ ಸಹಾಯಕ ನಿರ್ದೇಶಕರಾದ ರವೀಶ್, ಹೇಮಂತ್, ನಗರಸಭೆ ಆಯುಕ್ತ ರಾಮ್‌ದಾಸ್ ಇತರರು ಇದ್ದರು.

ಕೇಂದ್ರ ಪುರಸ್ಕೃತ ಯೋಜನೆ ಯಾದ ಜಲಶಕ್ತಿ ಅಭಿಯಾನದ ಪ್ರಗತಿ ಪರಿಶೀಲನೆ ಸಂಬAಧ ಕೊಡಗು ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿರುವ ಕೇಂದ್ರ ತಂಡ ಸೋಮವಾರ ಸೋಮವಾರಪೇಟೆ, ಮಂಗಳವಾರ ಮಡಿಕೇರಿ ಮತ್ತು ಬುಧವಾರದಂದು ವೀರಾಜಪೇಟೆ ತಾಲೂಕಿನಲ್ಲಿ ಅಭಿಯಾನದ ಸ್ಥಳ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ.