ಮಡಿಕೇರಿ. ಜೂ. ೨೧: ಕೆ.ನಿಡುಗಣೆ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ಅಧ್ಯಕ್ಷರಾಗಿ ಡೀನ್ ಬೋಪಣ್ಣ, ಉಪಾಧ್ಯಕ್ಷರಾಗಿ ರೀಟಾ ಮುತ್ತಣ್ಣ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಈ ಹಿಂದೆ ನಡೆದಿದ್ದ ಒಪ್ಪಂದದAತೆ ಹದಿನೈದು ತಿಂಗಳ ಕಾಲ ಅಧ್ಯಕ್ಷರಾಗಿದ್ದ ಕೊಕ್ಕಲೇರ ಅಯ್ಯಪ್ಪ ಹಾಗೂ ಉಪಾಧ್ಯಕ್ಷರಾಗಿದ್ದ ಕೆ.ಡಿ. ಪಾರ್ವತಿ ಅವರು ಡೀನ್ ಬೋಪಣ್ಣ ಹಾಗೂ ರೀಟಾ ಮುತ್ತಣ್ಣ ಅವರುಗಳಿಗೆ ಅಧಿಕಾರ ಹಸ್ತಾಂತರಿಸಿದರು.

ಕೆ.ಬಾಡಗ ವಾರ್ಡ್ನಿಂದ ನಾಲ್ಕು ಬಾರಿ ಸದಸ್ಯರಾಗಿ ಆಯ್ಕೆ ಆಗಿರುವ ಡೀನ್ ಬೋಪಣ್ಣ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ನಾಲ್ಕು ಬಾರಿ ಸದಸ್ಯರಾಗಿ ಆಯ್ಕೆ ಆಗಿರುವ ರೀಟಾ ಮುತ್ತಣ್ಣ ಒಂದು ಬಾರಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು ಇದೀಗ ಎರಡನೇ ಬಾರಿಗೆ ಉಪಾಧ್ಯಕ್ಷರಾಗಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಡೀನ್ ಬೋಪಣ್ಣ ಗ್ರಾಮದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ನಗರ ಬಿಜೆಪಿ ಕಾರ್ಯದರ್ಶಿ ಬಿ.ಪಿ. ಡಿಶು ಮತ್ತಿತರರು ಹಾಜರಿದ್ದರು. ಚುನಾವಣಾ ಪ್ರಕ್ರಿಯೆ ತಹಶೀಲ್ದಾರ್ ಮಹೇಶ್ ನೇತೃತ್ವದಲ್ಲಿ ನಡೆಯಿತು.