ಕಡಂಗ, ಜೂ. ೨೧: ಮಡಿಕೇರಿ ತಾಲೂಕಿನ ಕಕ್ಕಬ್ಬೆ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸುಮಾರು ೫೦೦ ಉಚಿತ ಪುಸ್ತಕಗಳನ್ನು ಸಮಾಜ ಸೇವಕ ಕದ್ದಣಿಯಂಡ ಹರೀಶ್ ಬೋಪಣ್ಣ ಅವರ ವತಿಯಿಂದ ವಿತರಣೆ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ದಾನಿಗಳಾದ ಬೋಪಣ್ಣ, ಜಿಲ್ಲೆಯಲ್ಲಿ ರುವ ಹಲವು ವಿದ್ಯಾಸಂಸ್ಥೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಬುಕ್ ನೀಡ ಲಾಗಿದ್ದು, ಕೊಡಗಿನಲ್ಲಿರುವ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೇಕಾದಂತಹ ಎಲ್ಲಾ ಸಹಕಾರವನ್ನು ಜಿಲ್ಲೆಯಲ್ಲಿರುವ ದಾನಿಗಳು ಕೊಡಲು ಮುಂದೆ ಬರಬೇಕು. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರವಾಗುತ್ತದೆ ಎಂದು ನುಡಿದರು. ಈ ಸಂದರ್ಭ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲಿಯಂಡ ಸಂಪತ್, ಮುಖಂಡರಾದ ಲವ ಚಿಣ್ಣಪ್ಪ, ಶಾಲೆಯ ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಊರಿನ ಮುಖಂಡರು ಇದ್ದರು.