*ಗೋಣಿಕೊಪ್ಪ, ಜೂ. ೨೧: ೬೦ ಲಕ್ಷ ಅನುದಾನದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಿಸಿದ ನಾಲೆಯನ್ನು ಶಾಸಕ ಕೆ.ಜಿ. ಬೋಪಯ್ಯ ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಮಾಡು ಗ್ರಾಮದಲ್ಲಿ ಗ್ರಾಮದ ಅನುಕೂಲಕ್ಕೆ ಅನುವು ಮಾಡಿಕೊಟ್ಟರು.
ನಂತರ ರೂ. ೫ ಕೋಟಿ ವೆಚ್ಚದಲ್ಲಿ ಕಂಡAಗಾಲ ಹಾಗೂ ಬಿ. ಶೆಟ್ಟಿಗೇರಿ ಗ್ರಾಮದಲ್ಲಿ ರೈತರ ಅನುಕೂಲಕ್ಕಾಗಿ ನಿರ್ಮಿಸಲಾಗುತ್ತಿರುವ ಕಿಂಡಿ ಅಣೆಕಟ್ಟು ಮತ್ತು ಸೇತುವೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣೆ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ, ಉಪಾಧ್ಯಕ್ಷೆ ಪಡಿಞರಂಡ ಕವಿತಾ ಪ್ರಭು, ಬಾಳೆಲೆ ವಿಜಯಲಕ್ಷಿö್ಮ ವಿದ್ಯಾಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಗೌರವ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ವನವಾಸಿ ಕಲ್ಯಾಣ ಸಂಸ್ಥೆ ಅಧ್ಯಕ್ಷ ಚಕ್ಕೇರ ಮನು ಕಾವೇರಪ್ಪ, ವನವಾಸಿ ಕಲ್ಯಾಣ ಸಂಸ್ಥೆಯ ರಮೇಶ್ ಭಟ್, ವನವಾಸಿ ಕಲ್ಯಾಣ ಕೊಡಗು ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಹರೀಶ್, ಕಾರ್ಯದರ್ಶಿ ಪಡಿಞರಂಡ ಪ್ರಭುಕುಮಾರ್, ಖಜಾಂಚಿ ಪಾಲೆಕಂಡ ಮನು ಮತ್ತಿತರರು ಹಾಜರಿದ್ದರು.