*ಗೋಣಿಕೊಪ್ಪ, ಜೂ. ೨೧: ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾ.ಪಂ. ವ್ಯಾಪ್ತಿಯಲ್ಲಿ ತಹಶೀಲ್ದಾರ್ ಎಂ.ಎಸ್. ಪ್ರಶಾಂತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ನಡೆಸಲಾಯಿತು.

ಗ್ರಾಮಸ್ಥರು ವಿದ್ಯುತ್ ಸಮಸ್ಯೆ, ಕಾಡುಪ್ರಾಣಿಗಳ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಕಂದಾಯ ಇಲಾಖೆಯ ಪೌತಿ ಖಾತೆ, ಕಂದಾಯ ನಿಗದಿ ಇತರೆ ಸಮಸ್ಯೆಗಳನ್ನು ಬಗೆಹರಿಸು ವಂತೆ ಮನವಿ ಮಾಡಿದರು.

ಕಂದಾಯ ಇಲಾಖೆ ಯಲ್ಲಿನ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಿ ಜನಪರ ಕಾರ್ಯಗಳನ್ನು ನಡೆಸಲಾ ಗುವುದು ಎಂದು ಗ್ರಾಮಸ್ಥರಿಗೆ ತಹಶೀಲ್ದಾರ್ ಭರವಸೆ ನೀಡಿದರು. ಗ್ರಾಮಸ್ಥರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.