ಜೂ. ೨೧: ‘ಮಾನವೀಯತೆಗಾಗಿ ಯೋಗ’ ಎಂಬ ಧ್ಯೇಯದೊಂದಿಗೆ ೮ನೇ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆಯನ್ನು ಕೊಡಗು ಜಿಲ್ಲೆಯಾದ್ಯಂತ ಉತ್ಸಾಹದಿಂದ ಆಚರಿಸಲಾಯಿತು. ಜಿಲ್ಲಾಡಳಿತ, ಯೋಗಸಂಸ್ಥೆಗಳು, ಶಾಲಾ - ಕಾಲೇಜುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಯೋಗ ದಿನಾಚರಣೆ ನಡೆಯಿತು.ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾಮಟ್ಟದ ಅಧಿಕಾರಿಗಳು, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತೀಯ ವಿದ್ಯಾಭವನ ಯೋಗಭಾರತಿ, ಪ್ರಣವ ಯೋಗ ಕೇಂದ್ರ ಪತಂಜಲಿ ಯೋಗ ಕೇಂದ್ರ, ಯೋಗ ಸಂಸ್ಥೆಗಳು, ನೀಮಾ, ರೆಡ್‌ಕ್ರಾಸ್ ಸೊಸೈಟಿ, ವಾರ್ತಾ ಇಲಾಖೆ, ಆಕಾಶವಾಣಿ, ಪತ್ರಕರ್ತರ ಸಂಘ ಕೊಡಗು ಹಾಗೂ ಸಾರ್ವಜನಿಕ ಸಹಯೋಗದೊಂದಿಗೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ಯೋಗ ದಿನಾಚರಣೆ ನಡೆಯಿತು.

ಯೋಗ ಶಿಕ್ಷಕ ಕೆ.ಕೆ. ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ ನಡೆದ ಯೋಗ ಪ್ರದರ್ಶನದಲ್ಲಿ ಶಾಸಕರುಗಳಾದ ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಪಶ್ಚಿಮಘಟ್ಟ ಸಂರಕ್ಷಣೆ ಕಾರ್ಯಪಡೆ ಅಧ್ಯಕ್ಷ ರವಿಕುಶಾಲಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಜಿಲ್ಲಾಧಿಕಾರಿ ಬಿ.ಸಿ. ಸತೀಶ, ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್, ವೈದ್ಯಕೀಯ ಕಾಲೇಜಿನ ಡೀನ್ ಕಳ್ಳಿಚಂಡ ಕಾರ್ಯಪ್ಪ, ತಹಶೀಲ್ದಾರ್ ಮಹೇಶ್, ನಗರಸಭಾ ಆಯುಕ್ತ ರಾಮದಾಸ್ ಸೇರಿದಂತೆ ಮಹಿಳೆಯರು, ಪುರುಷರು, ವೃದ್ಧರು, ಮಕ್ಕಳು ಪಾಲ್ಗೊಂಡಿದ್ದರು.

ಆರೋಗ್ಯ ಅತ್ಯಮೂಲ್ಯ - ರಂಜನ್

ಯೋಗ ದಿನಾಚರಣೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ಅಪ್ಪಚ್ಚುರಂಜನ್ ಮಾತನಾಡಿ, ಪ್ರತಿಯೊಬ್ಬರಿಗೂ ಆರೋಗ್ಯ ಅತ್ಯಮೂಲ್ಯವಾಗಿದ್ದು, ಯೋಗಾಭ್ಯಾಸ ದೊಂದಿಗೆ ಆರೋಗ್ಯಕ್ಕೆ ಪೂರಕವಾದ ಆಹಾರಗಳನ್ನು ಅವಶ್ಯಕತೆಗನು ಗುಣವಾಗಿ ಸೇವಿಸುವ ಮೂಲಕ ಎಲ್ಲರಿಗೂ ತಮ್ಮ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕ ಕೆ.ಕೆ. ಮಹೇಶ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಯೋಗದ ಬಗ್ಗೆ ಡಾ. ಕಾಮತ್ ಉಪನ್ಯಾಸ ನೀಡಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾದೇವಿ ಪ್ರಾಸ್ತಾವಿಕ ನುಡಿಯಾಡಿದರು. ಯೋಗದ ಬಗ್ಗೆ ಏರ್ಪಡಿಸಲಾಗಿದ್ದ ಕಿರುಚಿತ್ರ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದ ಯುಗದೇವಯ್ಯ ತಂಡ, ದ್ವಿತೀಯ ಸ್ಥಾನ ಪಡೆದ ಎಚ್.ಟಿ. ಅನಿಲ್ ನೇತೃತ್ವದ ಟಿವಿ೧ ತಂಡಕ್ಕೆ ಬಹುಮಾನ ವಿತರಣೆ ಮಾಡ ಲಾಯಿತು. ಡಾ. ಶುಭ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

ಪೊನ್ನAಪೇಟೆ: ಪೊನ್ನಂಪೇಟೆ ತಾಲೂಕು ಆಡಳಿತ ಹಾಗೂ ಪೊನ್ನಂಪೇಟೆ ಕೊಡವ ಸಮಾಜ ಸಹಯೋಗದಲ್ಲಿ ಕೊಡವ ಸಮಾಜ ಸಭಾಂಗಣದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಶೀಲ್ದಾರ್ ಪ್ರಶಾಂತ್ ಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿನಿತ್ಯ ಯೋಗ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಎಲ್ಲರೂ ಯೋಗ ಮಾಡುವ ಅಭ್ಯಾಸವನ್ನು ಬೆಳೆಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಕೊಡವ ಸಮಾಜ ಅಧ್ಯಕ್ಷ ಕಾಳಿಮಾಡ ಮೋಟಯ್ಯ, ಅಂರ‍್ರಾಷ್ಟಿçÃಯ ಕ್ರೀಡಾಪಟು ಎಂ. ಮಾಚಮ್ಮ, ಕಾನೂರು ಮಹಿಳಾ ಸಮಾಜದ ಅಧ್ಯಕ್ಷೆ ಮಧು ಬೋಪಯ್ಯ ಹಾಜರಿದ್ದರು. ಅಂರ‍್ರಾಷ್ಟಿçÃಯ ಯೋಗಪಟು ಅಮೃತ್ ರಾಕೇಶ್ ಸಾರ್ವಜನಿಕರಿಗೆ ಯೋಗಾಭ್ಯಾಸ ಮಾಡಿಸಿದರು.

ವೀರಾಜಪೇಟೆ: ಯೋಗದಿಂದ ಬದುಕಿನಲ್ಲಿ ಯಶಸ್ಸು ಸಾಧ್ಯ ಎಂದು ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಪ್ರಾಂಶುಪಾಲೆ ಉಷಾಲತಾ ಅಭಿಪ್ರಾಯಪಟ್ಟರು.

ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ಹಾಗೂ ಶ್ರೀ ಕಾವೇರಿ ಯೋಗ ಕೇಂದ್ರದ ೨೩ನೇ ವಾರ್ಷಿಕೋತ್ಸವದ ಅಂಗವಾಗಿ ಪಟ್ಟಣದ ಅಪ್ಪಯ್ಯಸ್ವಾಮಿ ರಸ್ತೆಯಲ್ಲಿನ ಕಾವೇರಿ ಆಶ್ರಮದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಅವರು ಹೇಳಿದರು. ವೈದ್ಯರು ಹಾಗೂ ಪಕ್ಷಿತಜ್ಞರಾದ ಡಾ.ನರಸಿಂಹನ್ ಮಾತನಾಡಿ, ಕ್ಷಣಿಕವಾದ ಮಾನವನ ಬದುಕಿನಲ್ಲಿ ಅಧ್ಯಾತ್ಮಿಕತೆ ಹಾಗೂ ಅಧ್ಯಾತ್ಮಿಕ ಆರೋಗ್ಯ ಮುಖ್ಯವಾಗಿದೆ. ಯೋಗ ಪ್ರತಿಯೊಬ್ಬರ ಜೀವನ ಶೈಲಿಯಾದಾಗ ಪರಸ್ಪರ ಸಹಕಾರ ಸ್ನೇಹ ಪ್ರೀತಿ ಸಮಾಜದಲ್ಲಿ ವೃದ್ಧಿಸುತ್ತದೆ ಎಂದರು.

ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಡಾ.ಹೇಮಪ್ರಿಯ ಮಾತನಾಡಿ, ಬದುಕಿನಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಲು ಯೋಗ ನೆರವಾಗುತ್ತದೆ ಎಂದರು. ಪ್ರಜಾಪಿತ ಬ್ರಹ್ಮಕುಮಾರಿ ಪೀಠದ ವೀರಾಜಪೇಟೆ ಘಟಕದ ಸಂಚಾಲಕರಾದ ಕಮಲ ಮಾತನಾಡಿದರು. ವೇದಿಕೆಯಲ್ಲಿ ಕಾವೇರಿ ಆಶ್ರಮದ ಗುರುಗಳಾದ ಆತ್ಮಾನಂದ ಸ್ವಾಮೀಜಿ, ಹಿರಿಯ ಯೋಗಪಟುಗಳಾದ ಬಿದ್ದಂಡ ಗಣಪತಿ ಹಾಗೂ ಯೋಗ ಗುರು ಸೀತಾರಾಂ ರೈ ಉಪಸ್ಥಿತರಿದ್ದರು. ಗಾನವಿ ಹಾಗೂ ಸಿಂಚನ ಪ್ರಾರ್ಥಿಸಿದರು. ಶಿಕ್ಷಕಿ ಲಲಿತಾ ಪ್ರಸನ್ನ ಸ್ವಾಗತಿಸಿದರು. ಉಪನ್ಯಾಸಕ ಹೇಮಂತ್ ಎಂ.ಎನ್ ನಿರೂಪಿಸಿದರು. ಬಿದ್ದಂಡ ಗಣಪತಿ ವಂದಿಸಿದರು.ಸೋಮವಾರಪೇಟೆ: ವಿಶ್ವಕ್ಕೆ ಯೋಗದ ಮಹತ್ವವನ್ನು ಸಾರಿದ ಹಿರಿಮೆ ಭಾರತದ್ದಾಗಿದೆ. ಪ್ರಾಚೀನ ಪರಂಪರೆಯ ಭಾಗವಾಗಿರುವ ಯೋಗವನ್ನು ಇಂದು ವಿಶ್ವದಾದ್ಯಂತ ಅಳವಡಿಸಿ ಕೊಳ್ಳುತ್ತಿರುವುದು ದೇಶಕ್ಕೆ ಸಲ್ಲುತ್ತಿರುವ ಗೌರವವಾಗಿದೆ ಎಂದು ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಆರ್. ಗೋವಿಂದ ರಾಜು ಅಭಿಪ್ರಾಯಿಸಿದರು.

ತಾಲೂಕು ಆಡಳಿತ, ಆಯುಷ್ ಇಲಾಖೆ ವತಿಯಿಂದ ಆರ್ಟ್ ಆಫ್ ಲಿವಿಂಗ್, ನಿರಂತರ ಯೋಗ ಕೇಂದ್ರ ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಪ್ರಾಚೀನ ಸಂಸ್ಕೃತಿಯ ಭಾಗವಾಗಿರುವ ಯೋಗವನ್ನು ವಿಶ್ವದಾದ್ಯಂತ ಪಸರಿಸುವಂತೆ ಮಾಡುವ ಮೂಲಕ ವಿಶ್ವಮಟ್ಟದಲ್ಲಿ ಪ್ರಾಮುಖ್ಯತೆ ಪಡೆಯುವಂತಾಗಿದೆ. ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸುಸ್ಥಿತಿಗೆ ಯೋಗ ಸಹಕಾರಿಯಾಗಿದ್ದು, ಪ್ರತಿಯೋರ್ವರೂ ನಿರಂತರವಾಗಿ ಯೋಗ್ಯಾಭ್ಯಾಸ ಮಾಡಬೇಕೆಂದು ತಹಶಿಲ್ದಾರ್ ಮನವಿ ಮಾಡಿದರು. ನಂತರ ಸರ್ಕಾರದ ಮಾರ್ಗಸೂಚಿಯನ್ವಯ ವಿವಿಧ ಯೋಗ ಪ್ರಾಕಾರಗಳನ್ನು ಆರ್ಟ್ ಆಫ್ ಲಿವಿಂಗ್ ಮತ್ತು ನಿರಂತರ ಯೋಗ ಕೇಂದ್ರದ ಶಿಕ್ಷಕರ ಮಾರ್ಗ ದರ್ಶನದಲ್ಲಿ ಮಾಡಲಾಯಿತು.

ಆಯುಷ್ ಇಲಾಖೆಯ ಸಹಯೋಗದೊಂದಿಗೆ ತಾಲೂಕು ಆಡಳಿತದ ಮೂಲಕ ಆಯೋಜಿಸಿದ್ದ ಯೋಗ ದಿನಾಚರಣೆಯಲ್ಲಿ ತಹಶೀಲ್ದಾರ್ ಗೋವಿಂದರಾಜು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ. ಮಹೇಶ್, ಕ್ಷೇತ್ರಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಅಣ್ಣಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ನಿರಂತರ ಯೋಗ ಕೇಂದ್ರದ ಶಿಕ್ಷಕ ಗಣೇಶ್, ಆರ್ಟ್ ಆಫ್ ಲಿವಿಂಗ್‌ನ ಶಿಕ್ಷಕಿ ರಾಗಿಣಿ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು, ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಯೋಗ ಪ್ರಾಕಾರಗಳನ್ನು ಆರ್ಟ್ ಆಫ್ ಲಿವಿಂಗ್ ಮತ್ತು ನಿರಂತರ ಯೋಗ ಕೇಂದ್ರದ ಶಿಕ್ಷಕರ ಮಾರ್ಗ ದರ್ಶನದಲ್ಲಿ ಮಾಡಲಾಯಿತು.

ಆಯುಷ್ ಇಲಾಖೆಯ ಸಹಯೋಗದೊಂದಿಗೆ ತಾಲೂಕು ಆಡಳಿತದ ಮೂಲಕ ಆಯೋಜಿಸಿದ್ದ ಯೋಗ ದಿನಾಚರಣೆಯಲ್ಲಿ ತಹಶೀಲ್ದಾರ್ ಗೋವಿಂದರಾಜು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ. ಮಹೇಶ್, ಕ್ಷೇತ್ರಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಅಣ್ಣಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ನಿರಂತರ ಯೋಗ ಕೇಂದ್ರದ ಶಿಕ್ಷಕ ಗಣೇಶ್, ಆರ್ಟ್ ಆಫ್ ಲಿವಿಂಗ್‌ನ ಶಿಕ್ಷಕಿ ರಾಗಿಣಿ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು, ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಕುಶಾಲನಗರ: ಎಂಟನೇ ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಕುಶಾಲನಗರದಲ್ಲಿ ವಿವಿಧೆಡೆ ಯೋಗಾಭ್ಯಾಸ ಪ್ರದರ್ಶನಗಳು ನಡೆಯಿತು.

ಕುಶಾಲನಗರ ತಾಲೂಕು ಆಡಳಿತದ ವತಿಯಿಂದ ಸ್ಥಳೀಯ ಜ್ಞಾನಭಾರತಿ ಶಾಲಾ ಅವರಣದಲ್ಲಿ ಯೋಗಾಭ್ಯಾಸ ನಡೆಯಿತು. ತಾಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್ ವಿವಿಧ ಸಂಘಟನೆಗಳ ಪ್ರಮುಖರು ಹಾಗೂ ತಾಲೂಕು ಕಚೇರಿ ನಾಡ ಕಚೇರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೂಡಿಗೆ ಸೈನಿಕ ಶಾಲೆಯಲ್ಲಿ ಯೋಗ ದಿನಾಚರಣೆ ಅಂಗವಾಗಿ ಶಾಲೆ ಆವರಣದ ಸಭಾಂಗಣದಲ್ಲಿ ಯೋಗ ಪ್ರದರ್ಶನ ನಡೆಯಿತು. ಶಾಲೆಯ ಉಪ ಪ್ರಾಂಶುಪಾಲರಾದ ಮನ್ಪ್ರೀತ್ ಸಿಂಗ್ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು.

ಕುಶಾಲನಗರ ಬಿಜೆಪಿ ವತಿಯಿಂದ ರೈತ ಸಹಕಾರ ಭವನದ ಆವರಣದಲ್ಲಿ ಯೋಗ ಪ್ರದರ್ಶನ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು ಯೋಗಪಟುಗಳಾದ ಗಣೇಶ್, ಶಿವರಾಂ ಅವರುಗಳು ಯೋಗಾಸನ ನಡೆಸಿಕೊಟ್ಟರು. ಈ ಸಂದರ್ಭ ದಕ್ಷಿಣ ಕನ್ನಡ ಬಿಜೆಪಿ ಪ್ರಭಾರಿ ಬಿ.ಬಿ ಭಾರತೀಶ್, ಜಿಲ್ಲಾ ಕಾರ್ಯದರ್ಶಿ ಮಾದಪ್ಪ, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಅಮೃತರಾಜ್, ಉಮಾಶಂಕರ್ ಮತ್ತಿತರರು ಇದ್ದರು.