ಸೋಮವಾರಪೇಟೆ, ಜೂ.೨೧: ಕೃಷಿ ಇಲಾಖೆಯ ವತಿಯಿಂದ ತಾಲೂಕಿನ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟಕ್ಕೆ ಸಹಾಯಧನದಡಿ ಮೂಲಕ ನೀಡಲಾದ ಟ್ರಾö್ಯಕ್ಟರ್‌ನ್ನು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಹಸ್ತಾಂತರಿಸಿದರು.ಈ ಸಂದರ್ಭ ಗ್ರಾ.ಪಂ. ಸದಸ್ಯೆ ದಾಕ್ಷಾಯಿಣಿ, ಕೃಷಿಕ ಸಮಾಜದ ಅಧ್ಯಕ್ಷ ಪೊನ್ನಪ್ಪ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಯಾದವ್ ಬಾಬು, ತೋಟಗಾರಿಕಾ ಇಲಾಖೆಯ ಮಂಜುನಾಥ್, ಒಕ್ಕೂಟದ ಅಧ್ಯಕ್ಷರಾದ ಸರೋಜಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.