ನಾಪೋಕ್ಲು, ಜೂ. ೨೧: ಮನುಷ್ಯ ನಿಸ್ವಾರ್ಥ ಸೇವೆಯೊಂದಿಗೆ ಪ್ರಾಮಾಣಿಕತೆ ಹೊಂದಿರಬೇಕು ಆಗ ಮಾತ್ರ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ ಎಂದು ಮಡಿಕೇರಿ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಅಭಿಪ್ರಾಯಪಟ್ಟರು.

ಮೂರ್ನಾಡು ಗೌಡ ಸಮಾಜದಲ್ಲಿ ಆಯೋಜಿಸಲಾಗಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ-ಮಡಿಕೇರಿ, ಜನ ಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ, ಉಷ ಫೈರ್ ಸೇಫ್ಟಿ ಪ್ರೆöÊವೇಟ್ ಲಿಮಿಟೆಡ್ ಮಂಗಳೂರು ಇವರ ಸಹಭಾಗಿತ್ವದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಂಯೋಜಕರು ಮತ್ತು ಸ್ವಯಂ ಸೇವಕರಿಗೆ ಜೀವ ರಕ್ಷಣಾ ಕೌಶಲ್ಯ ತರಬೆೆÃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಕ್ಷಣಾ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು.

ಅಪಘಾತ, ಪ್ರಕೃತಿ ವಿಕೋಪಗಳು ಸಂಭವಿಸಿದ ಸಂದರ್ಭ ಸಾರ್ವಜನಿಕರನ್ನು ರಕ್ಷಿಸುವ, ಅವರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸುವ ಹಾಗೂ ಧೈರ್ಯ ತುಂಬುವ ನಿಟ್ಟಿನಲ್ಲಿ ಎನ್‌ಡಿಆರ್‌ಎಫ್ ತಂಡದಿAದ ಒಂದು ದಿನದ ಜೀವರಕ್ಷಣಾ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದ್ದು ೧೭೯ ಮಂದಿ ತರಬೇತಿ ಪಡೆಯುತ್ತಿದ್ದಾರೆ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ವಸಂತ ಸಾಲಿಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕರ್ನಾಟಕ ರಾಜ್ಯದ ೧೧ ಜಿಲ್ಲೆಯ ೫೦ ತಾಲೂಕುಗಳಲ್ಲಿ ವಿಪತ್ತು ನಿರ್ವಹಣಾ ಘಟಕಗಳನ್ನು ಸ್ಥಾಪಿಸಿ ೫೦೫೫ ಮಂದಿಗೆ ಶೌರ್ಯ ವಿಪತ್ತು ನಿರ್ವಹಣಾ ತರಬೇತಿ ನೀಡಲಾಗುತ್ತಿದೆ ಎಂದರು.

ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿ ಜೈವಂತ ಪಟಗಾರ ಮಾತನಾಡಿ ವಿಪತ್ತು ನಿರ್ವಹಣಾ ಘಟಕವು ಅತ್ಯುಪಯುಕ್ತ ಕಾರ್ಯಕ್ರಮವಾಗಿದೆ. ರಾಜ್ಯದ ೫೦ ತಾಲೂಕುಗಳಲ್ಲಿ ವಿಪತ್ತು ನಿರ್ವಹಣಾ ಘಟಕಗಳಿದ್ದು ಪ್ರತಿ ತಾಲೂಕಿನಲ್ಲಿ ಸ್ವಯಂ ಸೇವಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಅರುಣ್‌ಕುಮಾರ್ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಉಷಾ ಫೈರ್ ಸೇಫ್ಟಿ ಪ್ರೆöÊವೇಟ್ ಲಿಮಿಟೆಡ್‌ನ ಅಧ್ಯಕ್ಷ ಕೆ. ಜಗದೀಶ್ ಅಡಪ ಉಪಸ್ಥಿತರಿದ್ದರು. ವೀರಾಜಪೇಟೆ ತಾಲೂಕು ಕೃಷಿ ಅಧಿಕಾರಿ ರಾಂಕುಮಾರ್ ಮಾರ್ನಾಡ್ ಕಾರ್ಯಕ್ರಮ ನಿರೂಪಿಸಿದರು. ಯೋಜನಾಧಿಕಾರಿ ದಿನೇಶ್ ಸ್ವಾಗತಿಸಿ ವಂದಿಸಿದರು.