ಸೋಮವಾರಪೇಟೆ, ಜೂ. ೨೦: ಅಂರ‍್ರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು. ತಾಲೂಕು ಆಡಳಿತ, ಆಯುಷ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಆರ್ಟ್ ಆಫ್ ಲಿವಿಂಗ್, ನಿರಂತರ ಯೋಗ ಕೇಂದ್ರ ಇವುಗಳ ಆಶ್ರಯದಲ್ಲಿ ಆಯೋಜನೆ ಗೊಂಡಿದ್ದ ಜಾಥಾಕ್ಕೆ ತಹಶೀಲ್ದಾರ್ ಗೋವಿಂದರಾಜು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ. ಸ್ಮಿತಾ, ನಿರಂತರ ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಹೊಂದಬಹುದು. ಈ ಹಿನ್ನೆಲೆಯಲ್ಲಿ ಪ್ರತಿಯೋರ್ವರೂ ಯೋಗಾಭ್ಯಾಸ ಮಾಡಬೇಕು ಎಂದರು.
ಕಳೆದ ಎಂಟು ವರ್ಷಗಳಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅಂರ‍್ರಾಷ್ಟಿçÃಯ ಯೋಗ ದಿನ ಆಚರಿಸಲಾಗುತ್ತಿದೆ. ತಾ. ೨೧ರಂದು (ಇಂದು) ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಬೆಳಿಗ್ಗೆ ೬.೧೫ಕ್ಕೆ ಯೋಗ ದಿನಾಚರಣೆ ಕಾರ್ಯಕ್ರಮ ನಡೆಸಲಾಗುವುದು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಾಥಾ ನಡೆಸಲಾಗುತ್ತಿದೆ ಎಂದರು.
ತಾ.ಪA. ಕಾರ್ಯನಿರ್ವಹಣಾಧಿ ಕಾರಿ ಜಯಣ್ಣ, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ಸದಸ್ಯರಾದ ಎಸ್.ಮಹೇಶ್, ಜಯಣ್ಣ, ಮಹೇಶ್, ಶರತ್, ಸ್ಕೌಟ್ಸ್ ಗೈಡ್ಸ್ ನ ತಾಲೂಕು ಅಧ್ಯಕ್ಷ ಬಿ.ಎ. ಭಾಸ್ಕರ್, ಆರ್ಟ್ ಆಫ್ ಲಿವಿಂಗ್‌ನ ಶಿಕ್ಷಕಿ ರಾಗಿಣಿ, ನಿರಂತರ ಯೋಗ ಕೇಂದ್ರದ ಶಿಕ್ಷಕ ಗಣೇಶ್, ತಾಲೂಕು ಕಂದಾಯ ಇಲಾಖೆಯ ಶರತ್, ಆಯುಷ್ ಇಲಾಖೆಯ ಸಿಬ್ಬಂದಿಗಳು, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿ ಗಳು ಜಾಥಾದಲ್ಲಿ ಭಾಗವಹಿಸಿದ್ದರು.