ಮಡಿಕೇರಿ, ಜೂ. ೨೦: ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದಲ್ಲಿ ಗ್ರಾಮ ಸಮಿತಿ ವತಿಯಿಂದ ಸೇನೆಯಲ್ಲಿ ಕರ್ತವ್ಯದಲ್ಲಿರುವ ಯೋಧನ ಕುಟುಂಬಕ್ಕೆ ಬಹಿಷ್ಕಾರ ಹಾಕಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಇಂದು ವಿವಿಧ ಇಲಾಖಾ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಂಬAಧಿಸಿದವರೊAದಿಗೆ ಚರ್ಚೆ ಮಾಡಿದ್ದಾರೆ.

ಯೋಧನ ಕುಟುಂಬಕ್ಕೆ ಬಹಿಷ್ಕಾರ ಹಾಕಿರುವ ಬಗ್ಗೆ ‘ಶಕ್ತಿ’ಯಲ್ಲಿ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಮನಿಸಿದ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಇಂದು ಯಡೂರು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೆಲ್ಲರೂ ಪ್ರಕರಣದ ಬಗ್ಗೆ ಚರ್ಚಿಸಿದ್ದಾರೆ. ಯಾವುದೇ ವ್ಯಕ್ತಿಗಳನ್ನು ಗ್ರಾಮದಿಂದ ಬಹಿಷ್ಕಾರ ಮಾಡುವುದು ಕಾನೂನು ಬಾಹಿರವೆಂದು ಮನವರಿಕೆ ಮಾಡಿಕೊಟ್ಟಿದ್ದಾರೆ. ಇದೇ ಸಂದರ್ಭ ಬಹಿಷ್ಕಾರಕ್ಕೊಳಗಾಗಿರುವ ಸೇವಾ ನಿರತ ಸೈನಿಕರ ಕುಟುಂಬದೊAದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಇAದು ಸಭೆ

ಪ್ರಕರಣಕ್ಕೆ ಸಂಬAಧಿಸಿದAತೆ ತಾ. ೨೧ರಂದು (ಇಂದು) ಗ್ರಾಮ ಸಮಿತಿ ವತಿಯಿಂದ ಸಭೆ ಏರ್ಪಡಿಸಿ, ಗ್ರಾಮಸ್ಥರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಗ್ರಾಮ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಅಧಿಕಾರಿಗಳಿಗೆ ಭರವಸೆ ನೀಡಿದ್ದಾರೆ. ಅಲ್ಲದೆ, ಸಭೆಯಲ್ಲಿ ಹಣದ ವಿಚಾರ ಹಾಗೂ ಬಹಿಷ್ಕಾರ ಮುಂದುವರಿಸ ಬೇಕೆಂದು ಯಾರಾದರೂ ಒತ್ತಾಯ ಮಾಡಿದಲ್ಲಿ ಅಂತಹವರ ಹೆಸರುಗಳನ್ನು ಅಧಿಕಾರಿಗಳಿಗೆ ಸಲ್ಲಿಸುವುದಾಗಿ ಗ್ರಾಮ ಸಮಿತಿಯವರು ಭರವಸೆ ನೀಡಿರುವುದಾಗಿ ತಿಳಿದು ಬಂದಿದೆ.