ಸೋಮವಾರಪೇಟೆ, ಜೂ. ೨೧: ತಾಲೂಕಿನ ಹಂಡ್ಲಿ ಹಾಗೂ ನಿಡ್ತ ಗ್ರಾಮ ಪಂಚಾಯಿತಿಗಳ ಬಡಕನಹಳ್ಳಿ ಮತ್ತು ಹಾರೆಹೊಸೂರು ಸಂಪರ್ಕ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ರೂ. ೧೦ ಲಕ್ಷ ವೆಚ್ಚದ ಸೇತುವೆಯನ್ನು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಉದ್ಘಾಟಿಸಿದರು. ಲೋಕೋಪಯೋಗಿ ಇಲಾಖೆ ಮೂಲಕ ರೂ. ೧೦ ಲಕ್ಷ ವೆಚ್ಚದಲ್ಲಿ ಸೇತುವೆ ನಿರ್ಮಿಸಿರುವುದರಿಂದ ಹಾರೆಹೊಸೂರು ಮತ್ತು ಬಡಕನಹಳ್ಳಿ ಗ್ರಾಮ ಸಂಪರ್ಕಕ್ಕೆ ಹೆಚ್ಚಿನ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ರಸ್ತೆಯನ್ನು ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ಈ ಸಂದರ್ಭ ಲೋಕೋಪಯೋಗಿ ಇಲಾಖೆಯ ಅಭಿಯಂತರ ವೆಂಕಟೇಶ್ ನಾಯಕ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.