ಗುಡ್ಡೆಹೊಸೂರು, ಜೂ. ೨೦: ಇಲ್ಲಿಗೆ ಸಮೀಪದ ನಂಜರಾಯಪಟ್ಟಣ ನಿವಾಸಿ ಎನ್.ಯು.ಭರತ್ (ಬಾಲು) ತಮ್ಮ ತೋಟದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಗೆ ಕಬ್ಬಿಣದ ಏಣಿ ತಗುಲಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ತೋಟದಲ್ಲಿ ಮರ ಕಡಿಯುವ ಸಂದರ್ಭ ಮರದ ಕೊಂಬೆ ಕಬ್ಬಿಣದ ಏಣಿಗೆ ತಗುಲಿ ಹೈಟೆನ್ಷನ್ ವಿದ್ಯುತ್ ತಂತಿಗೆ ಭರತ್ ಸ್ಪರ್ಶವಾಗಿದೆ. ಭಾರೀ ಅಂತರಕ್ಕೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ.

(ಮೊದಲ ಪುಟದಿಂದ) ಮೃತ ಭರತ್ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಆಗಲಿದ್ದಾರೆ. ಘಟನೆ ನಡೆದ ಒಂದು ಗಂಟೆಯ ನಂತರ ವಿಷಯ ತಿಳಿದಿದೆ. ಸ್ಥಳಕ್ಕೆ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಮಹಜರು ಮಾಡಿದ್ದಾರೆ.