ವೀರಾಜಪೇಟೆ, ಜೂ. ೨೦: ದೇಶದ ಸಂವಿಧಾನದಲ್ಲಿ ನಾಲ್ಕನೇ ಅಂಗ ಎಂದು ಕರೆಯಲ್ಪಡುವ ಮಾಧ್ಯಮ ಕ್ಷೇತ್ರವು ಅತ್ಯಂತ ಪ್ರಭಲವಾದ ಕ್ಷೇತ್ರವಾಗಿದೆ. ಸಮಾಜದಲ್ಲಿ ನಡೆಯುವ ಅನ್ಯಾಯಗಳನ್ನು ಎತ್ತಿಹಿಡಿದು ಸಮಾಜಕ್ಕೆ ತೋರುವ ಮಾನೋಭಾವ ಮಾಧ್ಯಮ ಕ್ಷೇತ್ರದಲ್ಲಿರುವ ಪತ್ರಕರ್ತ ಸಮಾಜಕ್ಕಿದೆ ಎಂದು ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಅಭಿಮತ ವ್ಯಕ್ತಪಡಿಸಿದರು.

ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಸುಂಕದಕಟ್ಟೆಯ ಬಳಿಯ ಅಲೋನಿಮ ರೇಸಾರ್ಟ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನಾ ಭಾಷಣ ಮಾಡಿದ ಶಾಸಕರು ಸಮಾಜಕ್ಕೆ ಸುದ್ದಿಯ ಮೂಲಕ ಮಾಹಿತಿ ನೀಡುವ ಪತ್ರಕರ್ತರು ಸಂದಿಗ್ಧ ಪರಿಸ್ಥಿತಿಯಲ್ಲಿಯೂ ತಮ್ಮ ಕಾರ್ಯಕ್ಷಮತೆಯನ್ನು ಮರೆಯದೆ ಸುದ್ದಿಯನ್ನು ಬಿತ್ತರಿಸುವಲ್ಲಿ ತಲ್ಲೀನರಾಗಿರುತ್ತಾರೆ. ಮಾಧÀ್ಯಮ ಮಿತ್ರರು ಆಡಳಿತ ವರ್ಗ, ರಾಜಕೀಯ ವರ್ಗ, ಸಾಮಾಜಿಕ ವರ್ಗದಲ್ಲಿನ ಡೊಂಕುಗಳನ್ನು ತಿಳಿಯಪಡಿಸುವ ಕಾರ್ಯ ನಿರ್ವಹಿಸುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ನೀಡಿದ ಕೆ.ಪಿ.ಸಿ.ಸಿ. ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಎಸ್. ಪೊನ್ನಣ್ಣ ಅವರು ಭಾರತ ಸಂವಿಧಾನದಲ್ಲಿ ಮಾಧ್ಯಮ ಕ್ಷೇತ್ರವನ್ನು ನಾಲ್ಕನೇ ಅಂಗವೆAದು ಪರಿಗಣಿ ಸಲ್ಪಟ್ಟಿದೆ. ಪತ್ರಕರ್ತರು ದಿಟ್ಟವಾಗಿ ಯಾವುದೇ ಒತ್ತಡಕ್ಕೆ ಮಣಿಯದೆ ಸುದ್ದಿ ಪ್ರಕಟಿಸುವಲ್ಲಿ ಕಾರ್ಯಧಕ್ಷತೆಯನ್ನು ತೋರಬೇಕು. ರಾಜ್ಯ ಮತ್ತು ಕೇಂದ್ರದಲ್ಲಿ ಆಳ್ವಿಕೆ ಮಾಡುವ ಯಾವುದೇ ಆಡಳಿತಾರೂಡ ಪಕ್ಷದ ಆಡಳಿತವನ್ನು ಧೈರ್ಯವಾಗಿ ಪ್ರಶ್ನೆ ಮಾಡಬೇಕು ಎಂದರು. ಮಾಧ್ಯಮ ಸಾರ್ವಜನಿಕರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು ವಿನಃ ಓಲೈಕೆಯ ಸುದ್ದಿಗೆ ಬಲಿಯಾಗಬಾರದು. ಸಾಮಾಜಿಕ ಭದ್ದತೆಯಿಂದ ಕಾರ್ಯನಿರ್ವಹಿಸಿದಲ್ಲಿ ಸಮಾಜವು ಮಾಧÀ್ಯಮ ಕ್ಷೇತ್ರವನ್ನು ಗೌರವಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದ ತಾಲೂಕು ದಂಡಾಧಿಕಾರಿ ಡಾ. ಆರ್. ಯೋಗಾನಂದÀ ಅವರು ಆಡÀಳಿತ ಮತ್ತು ಸಮಾಜದ ಕೊಂಡಿಯಾಗಿ ಮಾಧ್ಯಮ ಕ್ಷೇತ್ರ ಕಾರ್ಯನಿರ್ವಹಿಸು ತ್ತಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಶಕ್ತಿ ಮಾಧ್ಯಮ ಕ್ಷೇತ್ರಕ್ಕಿದೆ ಎಂದರು.

ಕಾರ್ಯಕ್ರಮದ ಮೊದಲಿಗೆ ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಜಿತ್ ಕುಮಾರ್ ಗುಹ್ಯ ಪ್ರಸ್ತಾವಿಕ ನುಡಿಗಳನ್ನಾಡಿದರು. ಸಮಾರಂಭ ಉದ್ದೇಶಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಧ್ಯಾಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷೆ ಬಿ.ಆರ್. ಸವಿತ ರೈ ಮತ್ತು ಉದ್ಯಮಿ ವಿಷ್ಣು ಪರಮಶಿವ ಅವರುಗಳು ಮಾತನಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಸಾಧಕರಿಗೆ ಸನ್ಮಾನ, ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು.

ವೇದಿಕೆಯಲ್ಲಿ ರಾಷ್ಟಿçÃಯ ಸಮಿತಿಯ ಸದಸ್ಯ ಸುನೀಲ್ ಪೊನ್ನಟ್ಟಿ, ಕುಶಾಲನಗರ ತಾಲೂಕು ಕಾರ್ಯನಿರತ ಪ್ರತಕರ್ತರ ಸಂಘದ ಅಧ್ಯಕ್ಷ ಚಂದ್ರಮೋಹನ್ ಮತ್ತು ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪ್ರತಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಮತ್ತು ಉಪಾಧ್ಯಕ್ಷ ಪುತ್ತಂ ಪ್ರದೀಪ್ ಅವರುಗಳು ಉಪಸ್ಥಿತರಿದ್ದರು.

ವೀರಾಜಪೇಟೆ ತಾಲೂಕು ಪ್ರತಕರ್ತರ ಸಂಘದ ಕೋಶಾಧಿಕಾರಿಗಳಾದ ಹೇಮಂತ್ ಕುಮಾರ್ ಸ್ವಾಗತಿಸಿ, ಎಂ.ಕೆ. ರವಿಕುಮಾರ್ ನಿರೂಪಿಸಿದರು. ಡಿ. ಮಂಜುನಾಥ್ ಪ್ರಾರ್ಥಿಸಿ, ಪ್ರಧಾನ ಕಾರ್ಯದÀರ್ಶಿ ಮುಸ್ತಾಫ ವಂದಿಸಿದರು.

ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ನಿರ್ದೇಶಕರುಗಳು, ಕುಶಾಲನಗರ, ಸೋಮವಾರಪೇಟೆ, ಪೊಂನ್ನಪೇಟೆ ಮತ್ತು ವೀರಾಜಪೇಟೆ ತಾಲೂಕು ಮಾಧ್ಯಮ ಮಿತ್ರರು ಸಮಾರಂಭದಲ್ಲಿ ಹಾಜರಿದ್ದರು.