ಮಡಿಕೇರಿ, ಜೂ.೨೨ : ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಉಗಮ ಸ್ಥಾನವನ್ನು ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ. ಮೇಲುಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳದೆ ಇರುವುದರಿಂದ ಭಾಗಮಂಡಲ ಅವ್ಯವಸ್ಥೆಯ ಆಗರವಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯAಡ ವೀಣಾ ಅಚ್ಚಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರು ಹಾಗೂ ಭಕ್ತರ ದೂರಿನÀ ಹಿನ್ನೆಲೆ ಭಾಗಮಂಡಲಕ್ಕೆ ಭೇಟಿ ನೀಡಿ ಮೇಲುಸೇತುವೆ ಕಾಮಗಾರಿ ಪರಿಶೀಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಳೆಗಾಲದಲ್ಲಿ ಗ್ರಾಮಸ್ಥರಿಗೆ ಹಾಗೂ ಭಕ್ತಾದಿಗಳಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಸರಕಾರದ ಆಡಳಿತಾವಧಿಯಲ್ಲಿ ಸೇತುವೆ ಯೋಜನೆಯನ್ನು ರೂಪಿಸಿ ಕಾಮಗಾರಿ ಆರಂಭಿಸಲಾಗಿತ್ತು. ಆದರೆ ಇಂದು ಕೊಡಗಿನ ಬಿಜೆಪಿ ಪ್ರತಿನಿಧಿಗಳು ಸೇತುವೆ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಈ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದ ಸಂದರ್ಭ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಮಳೆಗಾಲದ ಸಂದರ್ಭ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆ ದೊರೆತಿತ್ತು. ಆದರೆ ಇದುವರೆಗೂ ಯೋಜನೆ ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚರಂಡಿಯ ನೀರು ಕಾವೇರಿ ಸಂಗಮಕ್ಕೆ ಸೇರುತ್ತಿದ್ದು, ರಸ್ತೆಗಳು ಸಂಪೂರ್ಣ ಕೆಸರುಮಯವಾಗಿದೆ. ಕಾಮಗಾರಿಯ ದೊಡ್ಡ ದೊಡ್ಡ ಪಿಲ್ಲರ್‌ಗಳು ರಸ್ತೆ ಮಧ್ಯಭಾಗದಲ್ಲಿಯೇ ತಡೆಗೋಡೆಗಳಂತೆ ಬಿದ್ದಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಪ್ರತಿವರ್ಷದಂತೆ ಈ ಬಾರಿಯು ಮಳೆಗಾಲದಲ್ಲಿ ತ್ರಿವೇಣಿ ಸಂಗಮ ಪ್ರವಾಹದಿಂದ ದ್ವೀಪವಾಗಿ ಮಾರ್ಪಡುವ ಸಾಧ್ಯತೆ ಇದೆ. ಇದರಿಂದ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಪರದಾಡಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾವೇರಿ ನೀರಾವರಿ ನಿಗಮದ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಯ ಗುತ್ತಿಗೆ ಪಡೆದ ನಂತರ ಸ್ಥಳ ಪರಿಶೀಲಿಸದೆ ಇರುವುದು ಈ ಅವ್ಯವಸ್ಥೆಗಳಿಗೆ ಕಾರಣವೆಂದು ಆರೋಪಿಸಿದರು.

ವ್ಯವಸ್ಥಾಪನಾ ಸಮಿತಿ ರಚಿಸಿ

ತಲಕಾವೇರಿ, ಭಾಗಮಂಡಲ ವ್ಯವಸ್ಥಾಪನಾ ಸಮಿತಿ ರಚನೆಯಾಗದೆ ಇರುವುದೇ ಪುಣ್ಯ ಕ್ಷೇತ್ರದ ಅವ್ಯವಸ್ಥೆಗಳಿಗೆ ಕಾರಣವೆಂದು ಟೀಕಿಸಿದ ಅವರು, ಸರಕಾರ ತಕ್ಷಣ ಸಮಿತಿ ರಚನೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭ ವಲಯ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಹರ್ಷ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾದ ಬಿದ್ದಂಡ ಸುಮಿತ ಮಾದಪ್ಪ, ಸುನೀಲ್ ಪತ್ರವೋ ಪ್ರಮುಖರಾದ ಬೊಳ್ಳಜಿರ ಬಿ.ಅಯ್ಯಪ್ಪ ಹಾಜರಿದ್ದರು.