ಗುಡ್ಡೆಹೊಸೂರು, ಜೂ. ೨೨: ಇಲ್ಲಿನ ಗ್ರಾಮ ಪಂಚಾಯಿತಿಗೆ ಉತ್ತಮ ಪಂಚಾಯಿತಿ ಮತ್ತು ಉತ್ತಮ ಉದ್ಯಾನವನ ನಿರ್ಮಾಣ ಮತ್ತು ಜನಸ್ನೇಹಿ ಗ್ರಾಮ ಪಂಚಾಯಿತಿ ಹಾಗೂ ಉತ್ತಮ ತ್ಯಾಜ್ಯ ನಿರ್ವಹಣಾ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ಮಡಿಕೇರಿಯ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ವಿತರಿಸಲಾಯಿತು.

ಪಂಚಾಯತ್ ರಾಜ್ ದಿನಾಚರಣೆಯ ಅಂಗವಾಗಿ ಜಿಲ್ಲೆಯ ವಿವಿಧ ಪಂಚಾಯಿತಿಗಳಿಗೆ ಪ್ರಶಸ್ತಿಗಳನ್ನು ನೀಡಲಾಯಿತು.