ಮಡಿಕೇರಿ, ಜೂ. ೨೨: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ವೀರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಘಟಕವನ್ನು ರಚಿಸಲಾಗಿದೆ. ಸಿದ್ದಾಪುರದಲ್ಲಿ ತಾಲೂಕು ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ ಅವರ ಅಧ್ಯಕ್ಷತೆಯಲ್ಲಿ ನಡೆದ ಹೋಬಳಿ ಸದಸ್ಯರ ಸಮಾಲೋಚನಾ ಸಭೆಯಲ್ಲಿ ನೂತನ ಪದಾಧಿ ಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಿದ್ದಾಪುರದ ಟಿ.ಹೆಚ್. ಮಂಜುನಾಥ್ ಆಯ್ಕೆಯಾಗಿದ್ದು, ಗೌರವ ಕಾರ್ಯದರ್ಶಿಗಳನ್ನಾಗಿ ಸಿದ್ದಾಪುರದ ವಿ.ಎಸ್. ಗುರುದರ್ಶನ್, ಮಾಲ್ದಾರೆ ಗುಡ್ಲೂರಿನ ಸಿ. ವಿಜಯಲಕ್ಷಿö್ಮ ಹಾಗೂ ಗೌರವ ಕೋಶಾಧ್ಯಕ್ಷರನ್ನಾಗಿ ಕರಡಿಗೋಡಿನ ಕೆ.ಆರ್. ಸೂರಜ್ ಅವರನ್ನು ನೇಮಕ ಮಾಡಿರುವುದಾಗಿ ಕ.ಸಾ.ಪ. ಜಿಲ್ಲಾಧ್ಯಕ್ಷ ಎಂ.ಪಿ. ಕೇಶವಕಾಮತ್ ತಿಳಿಸಿದ್ದಾರೆ.