ಕೂಡಿಗೆ, ಜೂ. ೨೨ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ, ಕಾನೂನು, ಹಾಲಿನ ಶೇಖರಣೆ, ಸಂಗ್ರಹಣೆ ಹಾಗೂ ಲೆಕ್ಕಪತ್ರ ನಿರ್ವಹಣೆ ಕುರಿತಾದ ವಿಶೇಷ ಶಿಕ್ಷಣ ಕಾರ್ಯಾಗಾರ ತಾ. ೨೩ರಂದು (ಇಂದು) ಕೂಡಿಗೆಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಲಿದೆ ಎಂದು ಯೂನಿಯನ್ ಸಹಕಾರ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ತಿಳಿಸಿದ್ದಾರೆ.

ಉದ್ಘಾಟನೆಯನ್ನು ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷÀ ಎ.ಕೆ. ಮನುಮುತ್ತಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯೂನಿಯನ್‌ನ ಉಪಾಧ್ಯಕ್ಷ ಪಿ.ಸಿ. ಮನು ರಾಮಚಂದ್ರ, ನಿರ್ದೇಶಕರಾದ ಬಿ.ಎ. ರಮೇಶ್ ಚಂಗಪ್ಪ, ಎನ್.ಎ. ರವಿ ಬಸಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.