ಗೋಣಿಕೊಪ್ಪಲು, ಜೂ.೨೨: ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಅವರು ಚೆಸ್ಕಾಂ, ಐಟಿಡಿಪಿ, ಅಂಬೇಡ್ಕರ್ ನಿಗಮ ಹಾಗೂ ಅರಣ್ಯ ಇಲಾಖೆಯ ವಿವಿಧ ಅಧಿಕಾರಿಗಳೊಂದಿಗೆ ತಿತಿಮತಿ ಆಶ್ರಮ ಶಾಲೆಯಲ್ಲಿ ತಾ.೨೩ (ಇಂದು) ಬೆಳಿಗ್ಗೆ ೧೧.೩೦ ಗಂಟೆಗೆ ಸಭೆ ನಡೆಯಲಿದೆ.

ಅರಣ್ಯದಲ್ಲಿ ವಾಸವಿರುವ ಆದಿವಾಸಿ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ದೊರಕದೆ ಇರುವುದು, ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಕೊಳವೆ ಬಾವಿಗೆ ವಿದ್ಯುತ್ ನೀಡದೆ ಇರುವುದು ಸೇರಿದಂತೆ ಇನ್ನಿತರ ಗಿರಿಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಭೆ ನಡೆಸಲಿದ್ದಾರೆ. ಅಲ್ಲದೆ ತಾಲೂಕಿನ ವಿವಿಧ ಭಾಗದ ಹಾಡಿಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.