ಗೋಣಿಕೊಪ್ಪಲು, ಜೂ. ೨೩: ದಕ್ಷಿಣ ಕೊಡಗಿನ ಕುಟ್ಟಂದಿ, ಬಿ. ಶೆಟ್ಟಿಗೇರಿ, ವಿ. ಬಾಡಗ, ಕಂಡAಗಾಲ ಹಾಗೂ ರುದ್ರಗುಪ್ಪೆ ಗ್ರಾಮಸ್ಥರು ಹಾಗೂ ಇಲ್ಲಿನ ವಿದ್ಯಾರ್ಥಿಗಳು ಬಸ್‌ನ ಸೌಲಭ್ಯವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆ ಕೂಡಲೇ ಈ ಭಾಗಕ್ಕೆ ಸರ್ಕಾರಿ ಬಸ್‌ನ ಸೇವೆಯನ್ನು ಆರಂಭಿಸುವAತೆ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಶ್ ಸುಬ್ಬಯ್ಯ ಮುಂದಾಳತ್ವದಲ್ಲಿ ರೈತ ಸಂಘದ ಪದಾಧಿಕಾರಿಗಳು ಮಡಿಕೇರಿಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರನ್ನು ಭೇಟಿ ಮಾಡಿ ಈ ಭಾಗದಲ್ಲಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ದಿನನಿತ್ಯ ಅನುಭವಿಸುತ್ತಿರುವ ಕಷ್ಟಗಳ ಬಗ್ಗೆ ಮಾಹಿತಿ ಒದಗಿಸಿದರು.
ವಿದ್ಯಾರ್ಥಿಗಳು ಈ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ನಗರ ಪ್ರದೇಶಕ್ಕೆ ಮುಂಜಾನೆ ತೆರಳ ಬೇಕಾಗಿದೆ. ಬಸ್‌ನ ಸೌಕರ್ಯವಿಲ್ಲದೆ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಕಷ್ಟಪಡುತ್ತಿದ್ದಾರೆ. ಇದರಿಂದ ಇವರ ವಿದ್ಯಾಭ್ಯಾಸ ಮೊಟಕುಗೊಳ್ಳುವ ಸಾಧ್ಯತೆ ಇರುವುದರಿಂದ ಕೂಡಲೇ ಈ ಭಾಗಕ್ಕೆ ಮಡಿಕೇರಿ ಡಿಪೋದಿಂದ ಬೆಳಿಗ್ಗೆ, ಮಧ್ಯಾಹ್ನ ಹಾಗೂ ಸಂಜೆ, ಸಮಯದಲ್ಲಿ ಬಸ್‌ನ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರಿಗೆ ಮನವರಿಕೆ ಮಾಡಿದರು.
ಈ ವೇಳೆ ಕೊಡಗು ಜಿಲ್ಲಾಧಿಕಾರಿಗಳಿಗೆ ಕೂಡ ರೈತ ಸಂಘದಿAದ ಮನವಿ ಮಾಡಲಾಯಿತು. ರೈತ ಸಂಘದ ಪೊನ್ನಂಪೇಟೆ ತಾಲೂಕಿನ ಅಧ್ಯಕ್ಷ ಆಲೆಮಾಡ ಮಂಜುನಾಥ್, ಬಿ. ಶೆಟ್ಟಿಗೇರಿ ರೈತ ಸಂಘದ ಅಧ್ಯಕ್ಷ ಚೇರಂಡ ಜಗನ್ ಹಾಜರಿದ್ದರು.