ಮಡಿಕೇರಿ, ಜೂ.೨೩: ವಿಕಲಚೇತನರ ಇಲಾಖೆ ವತಿಯಿಂದ ವೀರಾಜಪೇಟೆ ಕ್ಷೇತ್ರದ ವಿಶೇಷ ಚೇತನ ಫಲಾನುಭವಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಿಸುವ ಕಾರ್ಯಕ್ರಮವು ತಾ. ೨೪ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಶಾಸಕರಾದ ಕೆ.ಜಿ.ಬೋಪಯ್ಯ ಅವರು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿರುವ ಶಾಸಕರ ಕಚೇರಿಯಲ್ಲಿ ವಾಹನ ವಿತರಿಸಲಿದ್ದಾರೆ.

ಹಾಗೆಯೇ ತಾ. ೨೪ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಜಿ.ಪಂ.ಕಚೇರಿ ಆವರಣದಲ್ಲಿ ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಶೇಷ ಚೇತನ ಫಲಾನುಭವಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಿಸಲಿದ್ದಾರೆ ಎಂದು ವಿಕಲಚೇತನರ ಇಲಾಖೆ ಅಧಿಕಾರಿ ವಿಮಲ ಅವರು ತಿಳಿಸಿದ್ದಾರೆ.