ಮಡಿಕೇರಿ, ಜೂ. ೨೩: ಆಲ್ ಇಂಡಿಯಾ ಮುಸ್ಲಿಂ ಡೆವಲೋಪ್ಮೆಂಟ್ ಫಾರಂ ವೀರಾಜಪೇಟೆ ತಾಲೂಕು, ಕಡಂಗ ಕೆಡಿಎಸ್ ಮುಸ್ಲಿಂ ಯೂತ್ ಚಾರಿಟಿ ಜಂಟಿ ಆಶ್ರಯದಲ್ಲಿ ಮೈಸೂರಿನ ಅಲ್ ಅನ್ಸಾರ್ ಆಸ್ಪತ್ರೆ ಸಹಯೋಗದೊಂದಿಗೆ ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾ. ೨೬ ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಎಐಎಂಎಫ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಚೋಕಂಡಳ್ಳಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ ೧೦ ಗಂಟೆಗೆ ಶಿಬಿರವನ್ನು ವೀರಾಜಪೇಟೆ ವೃತ್ತ ನಿರೀಕ್ಷಕ ಶಿವರುದ್ರ ಅವರು ಉದ್ಘಾಟಿಸಲಿದ್ದಾರೆ. ಎಐಎಂಡಿಎಫ್ ವೀರಾಜಪೇಟೆ ತಾಲೂಕು ಅಧ್ಯಕ್ಷ ಸಿ.ಎ. ಫತಾಯಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಂಐಎAಡಿಎಫ್ ರಾಷ್ಟç ಸಮಿತಿ ಅಧ್ಯಕ್ಷ ನಸೀರ್ ಅಹ್ಮದ್, ಕಾರ್ಯಾಧ್ಯಕ್ಷ ಅಬೂಬಕರ್ ಸಜಿಪ, ಕಾರ್ಯದರ್ಶಿ ಅಮ್ಜದ್ ಪಾಷಾ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಹಬೂಬ್ ಸಾಬ್, ಹೊದವಾಡ ರಾಫೆಲ್ಸ್, ಪಿಯು ಕಾಲೇಜಿನ ಪ್ರಾಚಾರ್ಯರಾದ ತನ್ವೀರ್ ಮತ್ತಿತರರ ಪ್ರಮುಖರು ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಸ್ತಿçÃರೋಗ ಮತ್ತು ಪ್ರಸೂತಿ, ದಂತ ಚಿಕಿತ್ಸೆ, ಕೀಲು ಮತ್ತು ಮೂಳೆ, ಸಕ್ಕರೆ ಕಾಯಿಲೆ, ಹೃದಯ ರೋಗ ಮತ್ತಿತರ ತಪಾಸಣೆ ನಡೆಯಲಿದ್ದು, ಭಾಗವಹಿಸಲು ಇಚ್ಚಿಸುವವರು ೯೪೮೨೬೧೬೮೩೫ ಅಥವಾ ೯೭೪೦೩೨೬೩೬೮ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸ ಬಹುದೆಂದು ಅಬ್ದುಲ್ ಮಜೀದ್ ಚೋಕಂಡಳ್ಳಿ ಹೇಳಿದರು.

ಗೋಷ್ಠಿಯಲ್ಲಿ ಎಐಎಂಡಿಎಫ್ ಕೋಶಾಧಿಕಾರಿ ಸಿ.ಎ. ಅಶ್ರಫ್, ಸದಸ್ಯರುಗಳಾದ ಸೈಫುದ್ದೀನ್, ಹಾರಿಸ್ ಕೊಂಡAಗೇರಿ, ಕೆಡಿಎಸ್ ಮುಸ್ಲಿಂ ಯೂತ್ ಚಾರಿಟಿ ಉಪಾಧ್ಯಕ್ಷ ಶರೀಫ್, ಕಾರ್ಯದರ್ಶಿ ಸಿ.ಎಂ. ಆಶಿಕ್ ಉಪಸ್ಥಿತರಿದ್ದರು.