ಮಡಿಕೇರಿ, ಜೂ. ೨೩: ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ೩೫ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬAಧ ಅಧಿಸೂಚನೆ ಹೊರಡಿಸಿದ್ದು, ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಅಭ್ಯರ್ಥಿಗಳ ೧:೫ ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ೨೦೨೨ರ ಮೇ, ೩೦ ರಂದು ಪ್ರಕಟಿಸಿದಂತೆ ಈ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಯನ್ನು ತಾ. ೨೯ ರಂದು ಬೆಳಗ್ಗೆ ೧೦.೩೦ ಗಂಟೆಗೆ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆಸಲಾಗುವುದು ಮತ್ತು ಈ ಮಾಹಿತಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸ hಣಣಠಿs://ಞoಜಚಿgu.ಟಿiಛಿ.iಟಿ ನಲ್ಲಿ ಅಳವಡಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ತಿಳಿಸಿದ್ದಾರೆ.