ಮಡಿಕೇರಿ, ಜೂ.೨೩: ಪ್ರಸಕ್ತ(೨೦೨೨-೨೩) ಸಾಲಿಗೆ ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ. ರೂ.೧ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.೪೪,೫೦೦ ಆಗಿದೆ.

ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮಡಿಕೇರಿ ದೂ.ಸಂ.೦೮೨೭೨-೨೯೫೬೨೮, ಮಡಿಕೇರಿ ತಾಲೂಕು ಕಚೇರಿ ಮೊ.ಸಂಖ್ಯೆ: ೮೭೬೨೪೭೬೭೯೦, ವೀರಾಜಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ :೯೮೪೪೫೩೧೦೪೦, ಸೋಮವಾರಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ: ೯೪೮೧೭೭೨೧೪೩ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.