ಶನಿವಾರಸಂತೆ, ಜೂ. ೨೩: ಶನಿವಾರಸಂತೆ ಕಾಜೂರಿನಲ್ಲಿ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘವನ್ನು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸಹಕಾರಿ ಸಂಘಗಳ ಮೂಲಕ ಸ್ವಾವಲಂಬಿ ಸಮಾಜವನ್ನು ನಿರ್ಮಾಣ ಮಾಡಬೇಕೆಂದು ಕರೆ ನೀಡಿದರು. ರಾಜಕೀಯ ರಹಿತವಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಸಂಘವನ್ನು ಮುನ್ನಡೆಸಬೇಕಾಗಿ ತಿಳಿಸಿದರು.
ವೇದಿಕೆಯಲ್ಲಿ ಸಂಘದ ಅಧ್ಯಕ್ಷೆ ಗೀತಾ ಶಿವಕುಮಾರ್, ಉಪಾಧ್ಯಕ್ಷೆ ಕಾವ್ಯ ವಸಂತ್ ಕುಮಾರ್, ಕಾರ್ಯದರ್ಶಿ ಆಶಾ ಗಣೇಶ್, ಹಾಸನ ಹಾಲು ಒಕ್ಕೂಟ ನಿರ್ದೇಶಕ ಹೇಮಂತ್ ಕುಮಾರ್ ಹಾಗೂ ಇತರರು ಇದ್ದರು.