ಸೋಮವಾರಪೇಟೆ,ಜೂ.೨೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ ಹಾಗೂ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಆಶ್ರಯದಲ್ಲಿ ತಾ. ೨೭ರಂದು ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಗೋವಿಂದರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು, ತಾ. ೨೭ರಂದು ಪೂರ್ವಾಹ್ನ ೧೧ ಗಂಟೆಗೆ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಪಿ. ಅಪ್ಪಚ್ಚುರಂಜನ್ ವಹಿಸಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಉಪನ್ಯಾಸ ನೀಡಲಿದ್ದಾರೆ ಎಂದರು.

ಸಭೆಯಲ್ಲಿ ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ, ಎಸ್.ಎಂ. ಚಂಗಪ್ಪ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಡಿ.ವಿಜೇತ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಶಿಕ್ಷಣ ಇಲಾಖೆಯ ಕಿರಣ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.