ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ
ಮುAಬೈ, ಜೂ. ೨೫: ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. ಸ್ವಯಂ ಸೇವಾ ಸಂಸ್ಥೆಯೊAದರ ಮೇಲಿನ ಪ್ರಕರಣಕ್ಕೆ ಸಂಬAಧಿಸಿದAತೆ ಮುಂಬೈನಲ್ಲಿರುವ ತೀಸ್ಟಾ ಸೆಟಲ್ವಾಡ್ ಅವರ ನಿವಾಸಕ್ಕೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ತೆರಳಿ ಆಕೆಯನ್ನು ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಕರೆದೊಯ್ದಿದೆೆ. ೨೦೦೨ ರ ಗುಜರಾತ್ ದಂಗೆಗಳ ಬಗ್ಗೆ ಸೆಟಲ್ವಾಡ್ ಪೊಲೀಸರಿಗೆ ಆಧಾರ ರಹಿತ ಮಾಹಿತಿ ನೀಡಿದ್ದಾರೆ ಎಂದು ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ. ೨೦೦೨ರ ಗುಜರಾತ್ ಗಲಭೆಯಲ್ಲಿ ದೊಡ್ಡ ಪಿತೂರಿ ನಡೆದಿದೆ ಎಂದು ಹತ್ಯೆಯಾದ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿತ್ತು. ಆಗ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.
ತಿAಗಳಲ್ಲಿ ೧೫ ದಿನ ಅರಣ್ಯದಲ್ಲಿರಿ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು, ಜೂ. ೨೬: ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಿಂದ ಹಿಡಿದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳವರೆಗಿನ ಎಲ್ಲಾ ಹಂತದ ಅಧಿಕಾರಿಗಳು ಕಚೇರಿಗಳನ್ನು ಬಿಟ್ಟು ತಿಂಗಳಿಗೆ ೧೫ ದಿನ ಅರಣ್ಯದಲ್ಲಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ನಿಗಮದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದೀರಿ. ಕಚೇರಿ ಬಿಟ್ಟು ಹೊರಗೇ ಬರ್ತಿಲ್ಲ. ಅರಣ್ಯಕ್ಕೆ ಹೋಗಿ. ತಿಂಗಳಲ್ಲಿ ೧೫ ದಿನ ಅರಣ್ಯದಲ್ಲಿ ಇದ್ದರೆ ಉಳಿದ ಸಿಬ್ಬಂದಿಗಳಿಗೆ ಆತ್ಮಸ್ಥೆöÊರ್ಯ ಬರುತ್ತದೆ. ಅವರಿಗೆ ಮಾರ್ಗದರ್ಶನ ಸಿಗುತ್ತದೆ. ಹಿರಿಯ ಅಧಿಕಾರಿಗಳು ಅರಣ್ಯ ಕಾಪಾಡುವ ಕೆಲಸದಲ್ಲಿ ಇದ್ದಾರೆ ಎಂಬ ಭಾವನೆ ಬರುತ್ತದೆ. ಹೀಗಾಗಿ ೧೫ ದಿನ ಅರಣ್ಯದಲ್ಲಿ ಇರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಪ್ರಸ್ತುತ ಶೇ. ೨೩ ರಷ್ಟಿರುವ ಅರಣ್ಯ ಪ್ರದೇಶವನ್ನು ಐದು ವರ್ಷಗಳಲ್ಲಿ ಕನಿಷ್ಟ ಶೇ. ೩೦ಕ್ಕೆ ಹೆಚ್ಚಿಸಲು ಪ್ರಯತ್ನಿಸಬೇಕೆಂದು ಬಸವರಾಜ ಬೊಮ್ಮಾಯಿ ತಿಳಿಸಿದರು.