ಮಡಿಕೇರಿ, ಜೂ. ೨೪: ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದಡಿ (ಡೇ ನಲ್ಮ್) ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಸೃಜಿಸಿ ಗೌರವ ಧನದ ಆಧಾರದ ಮೇಲೆ ೧ ವರ್ಷಕ್ಕೆ ಗುತ್ತಿಗೆ ಆಧಾರದ ಮೇಲೆ ಮಡಿಕೇರಿ ನಗರ ಸಭೆಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿಯಾಗಿ ನಿಯುಕ್ತಿ ಗೊಳಿಸಲು ಅನುಮೋದನೆ ನೀಡಿದ್ದು, ಈ ಪ್ರಯುಕ್ತ ಮಾಸಿಕ ಗೌರವಧನ ರೂ. ೮ ಸಾವಿರ ಹಾಗೂ ಪ್ರಯಾಣ ಭತ್ಯೆ ಗರಿಷ್ಠ ರೂ. ೨ ಸಾವಿರ ದಂತೆ ೩ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಜಿದಾರರು ತಮ್ಮ ಅರ್ಜಿಯನ್ನು ಕಚೇರಿಯಲ್ಲಿ ಲಭ್ಯವಿರುವ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ತಾ. ೩೦ ರೊಳಗೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್ ತಿಳಿಸಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿ ಅರ್ಜಿ ಸಲ್ಲಿಸುವವರು ಪ್ರದೇಶ ಮಟ್ಟದ, ಸ್ವ ಸಹಾಯ ಸಂಘದ ಕನಿಷ್ಟ ೩ ವರ್ಷದ ಮಹಿಳಾ ಸದಸ್ಯರಿದ್ದು, ವಯೋಮಿತಿ ೧೮ ರಿಂದ ೪೫ ವರ್ಷದ ವಯೋಮಾನದವ ರಾಗಿರಬೇಕು. ಈ ಕುರಿತು ಸಂಘದ ಸದಸ್ಯತ್ವದ ದೃಢೀಕರಣ ಪ್ರಮಾಣ ಪತ್ರ ನೀಡಬೇಕು. ದ್ವಿತೀಯ ಪಿಯುಸಿ ಪಾಸಾಗಿರಬೇಕು. ಹೆಚ್ಚಿನ ವಿದ್ಯಾಭ್ಯಾಸ ಹೊಂದಿದವರಿಗೆ ಆಯ್ಕೆಯಲ್ಲಿ ಆದ್ಯತೆ ನೀಡಲಾಗು ವುದು. ಶೈಕ್ಷಣಿಕ ದಾಖಲಾತಿ ಲಗತ್ತಿಸಿರಬೇಕು.

ಕನಿಷ್ಟ ಕಂಪ್ಯೂಟರ್ ನಿರ್ವಹಣೆಯ ಜ್ಞಾನ ಹೊಂದಿರ ಬೇಕು. ಈ ಕುರಿತು ಪ್ರಮಾಣ ಪತ್ರ ಲಗತ್ತಿಸಿರಬೇಕು. ಅಭ್ಯರ್ಥಿಯು ಸ್ವ ಸಹಾಯ ಸಂಘದಿAದ ಸಾಲ ಪಡೆದು ಮರು ಪಾವತಿ ಮಾಡಿರಬೇಕು/ ಚಾಲ್ತಿಯಲ್ಲಿರಬೇಕು. ಸಂಘದಲ್ಲಿ ಪಡೆದ ಸಾಲ ಮರು ಪಾವತಿಸದೇ ಸುಸ್ತಿದಾರರಾಗಿರಬಾರದು. ಈ ಕುರಿತು ಸಂಘದಿAದ ದೃಢೀಕರಣ ಪತ್ರ ಲಗತ್ತಿಸಬೇಕು. ಸಂಪನ್ಮೂಲ ವ್ಯಕ್ತಿಗಳು ಮಡಿಕೇರಿ ನಗರಸಭೆಯ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಈ ಕುರಿತು ಅಗತ್ಯ ದಾಖಲೆ ಲಗತ್ತಿಸಬೇಕು. ಉತ್ತಮ ಸಂವಹನ ಕೌಶಲ್ಯ ಸೇವಾ ಮನೋಭಾವ ಹೊಂದಿರಬೇಕು.

ಆಯ್ಕೆಯಾಗುವ ಸಂಪನ್ಮೂಲ ವ್ಯಕ್ತಿಗಳು ಸರ್ಕಾರ ಸೂಚಿಸುವ ಬೇರೆ ಬೇರೆ ಸ್ಥಳಗಳಲ್ಲಿ, ಜಿಲ್ಲೆಗಳಲ್ಲಿ, ಹೊರ ರಾಜ್ಯಗಳಲ್ಲಿ ನೀಡುವ ತರಬೇತಿ ಅಥವಾ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಲು ಸಿದ್ದರಿರಬೇಕು. ಪಂಚಸೂತ್ರದ ಬಗ್ಗೆ ತಿಳುವಳಿಕೆ ಯನ್ನು ಹೊಂದಿದ್ದು, ಸ್ವ ಸಹಾಯ ಸಂಘ ನಿರ್ವಹಿಸಬೇಕಾದ ಪುಸ್ತಕಗಳ ಹಾಗೂ ವಹಿಗಳ ಬಗ್ಗೆ ಜ್ಞಾನವನ್ನು ಹೊಂದಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸು ವವರು ಯಾವುದೇ ಸರ್ಕಾರಿ, ಸರ್ಕಾರೇತರ ಸಂಸ್ಥೆಗಳಲ್ಲಿ ಪೂರ್ಣಾವಧಿ ಅಥವಾ ತಾತ್ಕಾಲಿಕ ಉದ್ಯೋಗಸ್ಥರಾಗಿರಬಾರದು. ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಈ ಮೊದಲು ಅರ್ಜಿ ಸಲ್ಲಿಸಿದವರು ಮರು ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್ ತಿಳಿಸಿದ್ದಾರೆ.

ಶುಶ್ರ‍್ರೂಷಕರ ಹುದ್ದೆಗಳಿಗೆ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇದರ ಅಧೀನ ಬೋಧಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ೩೫ ಶುಶ್ರ‍್ರೂಷಕರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿ ಸಲು ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಗಳನ್ನು ಈ ಸಂಸ್ಥೆಯ ಅಂತರ್ಜಾಲದಲ್ಲಿ ತಿತಿತಿ.ಞimsಞoಜಚಿgu.ಞಚಿಡಿ.ಟಿiಛಿ.iಟಿ ಪಡೆಯಬಹುದು. ಈ ಹುದ್ದೆಗಳನ್ನು ೧೧ ತಿಂಗಳ ಅವಧಿಗೆ ಅಥವಾ ಖಾಯಂ ಶುಶ್ರೂಷಕರ ನೇಮಕಾತಿ ಆಗುವವರೆಗೆ ಅಥವಾ ಮುಂದಿನ ಸರ್ಕಾರಿ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಂ ರೋಸ್ಟರ್ ನಿಯಮ ಪಾಲಿಸಿ ಮೂಲ ದಾಖಲೆಗಳ ಪರಿಶೀಲನೆಗೆ ಆಹ್ವಾನಿಸಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಜುಲೈ ೨ ರ ಸಂಜೆ ೫ ಗಂಟೆಯ ಒಳಗೆ ಅರ್ಜಿ ಶುಲ್ಕದೊಂದಿಗೆ ನಿರ್ದೇಶಕರು ಹಾಗೂ ಡೀನ್ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇವರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ. ಕಾರ್ಯಪ್ಪ ಅವರು ತಿಳಿಸಿದ್ದಾರೆ.

ಸಹಾಯಧನಕ್ಕೆ

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿನಲ್ಲಿ ಸಾಂಪ್ರದಾಯಿಕ, ಕುಶಲಕರ್ಮಿ ವೃತ್ತಿದಾರರ ಸಾಲ ಯೋಜನೆ ಮತ್ತು ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಗಳಲ್ಲಿ ಸುವಿಧಾ ತಂತ್ರಾAಶದ ಮುಖಾಂತರ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವಾಗ ಅರ್ಜಿ ದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು. (ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಗಳು).

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಸಂಬAಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಕಚೇರಿಯ ಅವಧಿಯಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇರುತ್ತದೆ.

ಈ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಸವಿತಾ ಮತ್ತು ಇದರ ಉಪ ಜಾತಿಗೆ ಸೇರಿದ ಅರ್ಜಿದಾರರು hಣಣಠಿs://suviಜhಚಿ. ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದೊಂದಿಗೆ ಅರ್ಜಿ ಸಲ್ಲಿಸಬಹುದು. ಹಾಗೂ ನಿಗಮದ ವೆಬ್‌ಸೈಟ್ hಣಣಠಿs://ಞssಜ. ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ಸಂಖ್ಯೆ: ೦೮೦-೨೨೩೭೪೮೩೨ ಮತ್ತು ೯೬೦೬೦೬೬೩೮೯ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ದೂ. ೦೮೨೭೨-೨೨೧೬೫೬ರಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿ ಗಳೊಂದಿಗೆ ಆಗಸ್ಟ್ ೩ ರೊಳಗೆ ಸುವಿಧಾ ತಂತ್ರಾAಶದ ಮುಖಾಂತರ ಸಲ್ಲಿಸುವಂತೆ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

‘ಗ್ರಾಮ ಒನ್’ ಕೇಂದ್ರ ಆರಂಭಕ್ಕೆ ಪ್ರಾಂಚೈಸಿಗಳಿAದ

ನಗರ ಪ್ರದೇಶಗಳಲ್ಲಿ ಜನರಿಗೆ ಸೇವೆ ನೀಡುತ್ತಿರುವ ಕರ್ನಾಟಕ ಒನ್, ಬೆಂಗಳೂರು ಒನ್ ಮಾದರಿ ಯಲ್ಲಿ “ಗ್ರಾಮ ಒನ್” ಮೂಲಕ ಹಳ್ಳಿಗರಿಗೂ ಸೇವೆ ನೀಡಬೇಕೆಂಬ ಉದ್ದೇಶದಿಂದ ಯೋಜನೆ ರೂಪಿಸ ಲಾಗಿದೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ೯೨ ಗ್ರಾಮ ಪಂಚಾಯಿತಿಗಳಲ್ಲಿ "ಗ್ರಾಮ ಒನ್" ಯೋಜನೆಯನ್ನು ಪ್ರಾರಂಭಿಸಲಾಗಿದೆ. ಆ ದಿಸೆಯಲ್ಲಿ ಹಾಕತ್ತೂರು, ಬೆಟ್ಟಗೇರಿ, ಎಮ್ಮೆಮಾಡು, ಕರಿಕೆ, ದೊಡ್ಡಮಳ್ತೆ, ತೋಳೂರುಶೆಟ್ಟಳ್ಳಿ, ಬೆಟ್ಟದಳ್ಳಿ, ಗರ್ವಾಲೆ, ಕೆದಕಲ್, ಹರದೂರು, ತೊರೆನೂರು, ನಾಲ್ಕೂರು ಶಿರಂಗಾಲ, ಕದನೂರು, ಅಮ್ಮತ್ತಿ, ಬೆಟೋಳಿ, ಹಾತೂರು, ನಿಟ್ಟೂರು, ಬಲ್ಯಮಂಡೂರು, ಮಾಯಮುಡಿ, ಕೆ.ಬಾಡಗ, ಪೊನ್ನಪ್ಪಸಂತೆ, ಬಿ. ಶೆಟ್ಟಿಗೇರಿ, ಕಿರುಗೂರು, ನಾಲ್ಕೇರಿ ಈ ೨೪ ಗ್ರಾಮ ಪಂಚಾಯಿತಿಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ “ಗ್ರಾಮ ಒನ್” ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿAದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಾಂಚೈಸಿಗಳು hಣಣಠಿs://ತಿತಿತಿ. ಞಚಿಡಿಟಿಚಿಣಚಿಞಚಿoಟಿe. gov.iಟಿ/Pubಟiಛಿ/ಉಡಿಚಿm ಔಟಿe ಈಡಿಚಿಟಿಛಿhisee ಖಿeಡಿms ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಿಯಾಂಕ ಕೆ.ಎಸ್., ಜಿಲ್ಲಾ ಯೋಜನಾ ನಿರ್ದೇಶಕರು, ಜಿಲ್ಲಾಧಿಕಾರಿ ಅವರ ಕಚೇರಿ, ಮೊಬೈಲ್ ಸಂಖ್ಯೆ +೯೧ ೮೮೬೧೬೮೨೧೨೦, ೦೮೨೭೨-೨೨೩೫೦೦ ನ್ನು ಸಂಪರ್ಕಿಸಬಹುದೆAದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.