ಮಡಿಕೇರಿ, ಜೂ.೨೫ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ ಹಾಗೂ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಹಾಗೂ ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಸಂಪೂರ್ಣ ಸಹಕಾರದೊಂದಿಗೆ ತಾ. ೨೭ ರಂದು ಸೋಮವಾರಪೇಟೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವ ನಡೆಯಲಿದೆ ಎಂದು ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚAಗಪ್ಪ ತಿಳಿಸಿದ್ದಾರೆ.

ಅಂದು ಬೆಳಗ್ಗೆ ೧೧ ಗಂಟೆಗೆ ಸೋಮವಾರಪೇಟೆ ಚೌಡ್ಲು ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಬಿ.ಸಿ.ನಾಗೇಶ್ ಉದ್ಘಾಟಿಸಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರುಗಳಾದ ಆಯನೂರು ಮಂಜುನಾಥ, ಸುಜಾಕುಶಾಲಪ್ಪ, ಸೋಮವಾರಪೇಟೆ ಪ.ಪಂ ಅಧ್ಯಕ್ಷ ಪಿ.ಕೆ.ಚಂದ್ರು, ಚೌಡ್ಲು ಗ್ರಾ.ಪಂ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಸೋಮವಾರಪೇಟೆ ಪ್ರಗತಿಪರ ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಒಕ್ಕಲಿಗರ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಎಂ.ಗಿರೀಶ್ ಮಲ್ಲಪ್ಪ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಬಿ.ಜೆ. ದೀಪಕ್ ಹಾಗೂ ತಾವು ಪಾಲ್ಗೊಳ್ಳುವುದಾಗಿ ಚಂಗಪ್ಪ ತಿಳಿಸಿದ್ದಾರೆ.

ಸೋಮವಾರಪೇಟೆ ತಾಲೂಕು ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಉಪನ್ಯಾಸ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.