ಗೋಣಿಕೊಪ್ಪ ವರದಿ, ಜೂ. ೨೪ : ಪತ್ರಿಕಾ ದಿನಾಚರಣೆ ಪ್ರಯುಕ್ತ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪೊನ್ನಂಪೇಟೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಜುಲೈ ೧ ರಂದು ಗೋಣಿಕೊಪ್ಪ ಕಾಪ್ಸ್ ಶಾಲೆಯಲ್ಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ಸ್ಪರ್ಧೆ ಆರಂಭಗೊಳ್ಳಲಿದ್ದು, ‘ನನ್ನ ಶೈಕ್ಷಣಿಕ ಬೆಳವಣಿಗೆಯಲ್ಲಿ ಪತ್ರಿಕೆಯ ಪಾತ’್ರ ಎಂಬ ವಿಷಯದಲ್ಲಿ ೪ ನಿಮಿಷಗಳ ಅವಧಿಯಲ್ಲಿ ಭಾಷಣ ಮಾಡಬೇಕಿದೆ. ಒಂದು ಕಾಲೇಜಿನಿಂದ ಇಬ್ಬರು ಸ್ಪರ್ಧಿಗಳಿಗೆ ಅವಕಾಶ ನೀಡಲಾಗಿದ್ದು, ತಾ. ೨೮ ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕಿದೆ. ಸ್ಪರ್ಧಿಗಳಿಗೆ ಪ್ರಮಾಣಪತ್ರ, ವಿಜೇತರಿಗೆ ಪಾರಿತೋಷಕದೊಂದಿಗೆ ನಗದು ಬಹುಮಾನ ನೀಡಲಾಗುವುದು ಎಂದು ಕಾರ್ಯಕ್ರಮ ಸಂಚಾಲಕ ಎಂ. ಎಂ. ಚನ್ನನಾಯಕ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ೭೭೬೦೫೦೭೭೧೪, ೯೯೪೫೬೩೫೫೦೨ ಸಂಪರ್ಕಿಸಬಹುದಾಗಿದೆ.