ಮಡಿಕೇರಿ, ಜೂ. ೨೪: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿಯ ಕಾರ್ಯಚಟುವಟಿಕೆಗೆ ಚಾಲನೆ ಕಾರ್ಯಕ್ರಮ ತಾ. ೨೬ ರಂದು (ನಾಳೆ) ನಡೆಯಲಿದೆ.

ಮೇಕೇರಿಯ ಖಾಸಗಿ ರೆಸಾರ್ಟ್ನಲ್ಲಿ ೧೦.೩೦ ಗಂಟೆಗೆ ನಡೆಯಲಿರುವ ಕಾರ್ಯಕ್ರಮ ಜಿಲ್ಲಾ ಸಂಘದ ಅಧ್ಯಕ್ಷೆ ಬಿ.ಆರ್ ಸವಿತಾರೈ ಅಧ್ಯಕ್ಷತೆಯಲ್ಲಿ ನಡೆಯಲಿದೆ. ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ರಾಜ್ಯ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಸದಸ್ಯರಿಗೆ ಸದಸ್ಯತ್ವದ ಗುರುತಿನ ಚೀಟಿ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ದಾನಿ ಡಾ. ಮಂಥರ್ ಗೌಡ ಭಾಗವಹಿಸಲಿದ್ದು, ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅವರಿಗೆ ರಾಜ್ಯ ಪ್ರಶಸ್ತಿ ಹಸ್ತಾಂತರ ನಡೆಯಲಿದೆ. ರಾಜ್ಯ ಸಮಿತಿ ನಿರ್ದೇಶಕರಾದ ಟಿ.ಎನ್. ಮಂಜುನಾಥ್, ರಾಷ್ಟಿçÃಯ ಸಮಿತಿ ಸದಸ್ಯ ಸುನಿಲ್ ಪೊನ್ನೆಟ್ಟಿ ಹಾಗೂ ಸೋಮವಾರಪೇಟೆ, ವೀರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರುಗಳು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರ.ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ ತಿಳಿಸಿದ್ದಾರೆ.